MUST READ | ಈ ತಿಂಗಳ ಕೊನೆಯಲ್ಲಿ ಮುಷ್ಕರ ಇದೆ, ಆಟೋ ‘ಸಿಗೋದಿಲ್ಲ’ ಗಮನಿಸಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ವರ್ಷದ ಕೊನೆಯಲ್ಲಿ ಬೆಂಗಳೂರಿನಲ್ಲಿ ಆಟೋ ಮುಷ್ಕರವಿದ್ದು, ಆಟೋ ಸೇವೆ ಅಲಭ್ಯವಾಗಲಿದೆ.
ಡಿ.29ರಂದು ಆಟೋ ಚಾಲಕರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರ ಕೈಗೊಳ್ಳಲಾಗಿದ್ದು, ರ‍್ಯಾಪಿಡೋ ಬೈಕ್ ಹಾಗೂ ಟ್ಯಾಕ್ಸಿ, ಬೌನ್ಸ್ ಎಲೆಕ್ಟ್ರಿಕ್ ಬೈಕ್‌ಗೆ ನೀಡಿರುವ ಅನುಮತಿ ವಾಪಾಸ್ ಪಡೆಯುವಂತೆ ಒತ್ತಾಯಿಸಿದ್ದಾರೆ.

ರ‍್ಯಾಪಿಡೋ ಬೈಕ್ ಹಾಗೂ ಟ್ಯಾಕ್ಸಿ ಮತ್ತು ಬೌನ್ಸ್ ಎಲೆಕ್ಟ್ರಿಕ್ ಬೈಕ್ ಬಂದ ನಂತರ ಆಟೋಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಕಡಿಮೆಯಾಗಿದೆ, ಇನ್ನು ಆಟೋ ದರಕ್ಕೂ ಬೈಕ್ ದರಕ್ಕೂ ಹೋಲಿಕೆ ಮಾಡಲಾಗುತ್ತಿದೆ ಎನ್ನುವುದು ಆಟೋ ಚಾಲಕರ ಮಾತಾಗಿದೆ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ಸ್ಟೇಷನ್‌ನಿಂದ ಬೃಹತ್ ಆಟೋ ರ‍್ಯಾಲಿ ಮೂಲಕ ವಿಧಾನಸೌಧಕ್ಕೆ ತೆರಳಿ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. 10 ಲಕ್ಷಕ್ಕೂ ಹೆಚ್ಚು ಚಾಲಕರು ಈಗಾಗಲೇ ಈ ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!