ಹೊಸದಿಗಂತ ಡಿಜಿಟಲ್ ಡೆಸ್ಕ್:
2025ನೇ ಸಾಲಿನ IPL ಲೀಗ್‌ನಲ್ಲಿ ಇನ್ನೂ 10 ಪಂದ್ಯಗಳು ಬಾಕಿ ಇರುವಾಗಲೇ ಪ್ಲೇ ಆಫ್‌ಗೆ ಮೂರು ತಂಡಗಳು ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿವೆ. ಉಳಿದಿರುವ ಇನ್ನೊಂದು ಸ್ಥಾನಕ್ಕೆ ಮೂರು ಪ್ರಮುಖ ತಂಡಗಳು ಪೈಪೋಟಿ ನಡೆಸಿವೆ.
ಪ್ಲೇ ಆಫ್ ನೋಡುವುದಾದರೆ ಗುಜರಾತ್ ಟೈಟನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಸೇರಿದ್ದು, ಇನ್ನೊಂದು ಸ್ಥಾನಕ್ಕೆ ಯಾವ ತಂಡ ಬರಲಿದೆ ಎಂದು ಕಾದು ನೋಡಬೇಕಷ್ಟೇ.
ಪ್ರಮುಖವಾಗಿ ಇನ್ನೊಂದು ಸ್ಥಾನಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್, ಮುಂಬೈ ಇಂಡಿಯನ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡಗಳು ಪೈಪೋಟಿ ನಡೆಸಿವೆ. ಲಖನೌ ಸೂಪರ್ ಜೈಂಟ್ಸ್ ತಂಡಕ್ಕೆ ಇನ್ನು ಮೂರು ಪಂದ್ಯಗಳು ಬಾಕಿ ಉಳಿದಿದ್ದು, ಈ ಮೂರರಲ್ಲಿ ಮೂರನ್ನು ಗೆದ್ದರೆ ಮಾತ್ರ ಪ್ಲೇ ಆಫ್ ತಲುಪುವ ಸಾಧ್ಯತೆ ಇದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಕೂಡ ಎರಡು ಪಂದ್ಯಗಳು ಬಾಕಿ ಉಳಿದಿದ್ದು, ಇದರಲ್ಲಿ 2ನ್ನೂ ಗೆದ್ದರೆ ಪ್ಲೇ ಆಫ್ ತಲುಪುವ ಸಾಧ್ಯತೆ ಇದೆ. ಇನ್ನು ಮುಂಬೈ ಇಂಡಿಯನ್ಸ್ ತಂಡಕ್ಕೆ ಎರಡು ಪಂದ್ಯಗಳು ಉಳಿದಿದ್ದು, ಇದರಲ್ಲಿ ಎರಡಕ್ಕೆ ಎರಡನ್ನೂ ಗೆದ್ದರೆ ಪ್ಲೇ ಆಫ್ ತಲುಪಲಿದೆ.