ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕಸಾಪ ತೆಗೆದುಕೊಂಡ ಆರು ನಿರ್ಣಯಗಳಿವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇಂದು ಸಂಪನ್ನಗೊಂಡಿದೆ.

ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮತ್ತು ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಬಹಿರಂಗ ಅಧಿವೇಶನದಲ್ಲಿ ಆರು ಪ್ರಮುಖ ನಿರ್ಣಯಗಳನ್ನು ಜಾರಿ ಮಾಡಲು ಸರ್ಕಾರಕ್ಕೆ ಒತ್ತಾಯಿಸಲಾಗಿದೆ.

  • ಕನ್ನಡ ಭಾಷಾ ಅಭಿವೃದ್ದಿ ಅಧಿನಿಯಮ- 2022 ಸಮಗ್ರ ಜಾರಿಗೆಗೆ ಒತ್ತಾಯ
  • ಸರ್ಕಾರಿ ಕನ್ನಡ ಶಾಲೆಗೆ ಕಟ್ಟಡ, ವಾಚನಾಲಯ ಸೇರಿ ಮೂಲ ಸೌಕರ್ಯ ಕಲ್ಪಿಸಬೇಕು‌. ಖಾಲಿ ಇರುವ ಶಿಕ್ಚಕರ ಹುದ್ದೆ ಭರ್ತಿ ಮಾಡುವುದು.
  •  ಸರೋಜಿನಿ ಮಹಿಷಿ ವರದಿ ಶಾಸನಬದ್ಧಗೊಳಿಸಿ ಅನುಷ್ಠಾನಗೊಳಿಸಬೇಕು. ಜೊತೆಗೆ ಕನ್ನಡಿಗರ ಉದ್ಯೋಗಕ್ಕೆ ತಡೆಯಾಗಿ ನ್ಯಾಯಾಲಯದಲ್ಲಿ ಬಾಕಿಯಿರುವ ಕೇಸ್​ಗಳನ್ನು ಸರ್ಕಾರ ಎದುರಿಸಬೇಕು.
  • ಧಾರವಾಡದಲ್ಲಿ ನಡೆಯಬೇಕಿದ್ದ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಅತಿ ಶೀಘ್ರದಲ್ಲಿ ನಡೆಸಬೇಕು.
  • ರಾಷ್ಟ್ರಕವಿ ಪ್ರಶಸ್ತಿಯನ್ನ ಘೋಷಿಸಿಬೇಕು.
  • 87ನೇ ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಕಾರಣವಾದ ಸಚಿವ ಚಲುವರಾಯಸ್ವಾಮಿಗೆ ಸೇರಿ ಎಲ್ಲರಿಗೂ, ಗಣ್ಯರಿಗೆ ಅಭಿನಂದನೆಗೆ ಮಂಡನೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!