March 24, 2026
Tuesday, March 24, 2026
spot_img

WEATHER | ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆ. 11ರಿಂದ ಭಾರಿ ಮಳೆ, ಯೆಲ್ಲೋ ಅಲರ್ಟ್​

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರ್ನಾಟಕದಾದ್ಯಂತ ಕಳೆದ ಎರಡು ದಿನಗಳಿಂದ ಮಳೆಯ ಪ್ರಮಾಣ ಕಡಿಮೆಯಾಗಿದೆ. ಸೆಪ್ಟೆಂಬರ್ 11ರಿಂದ ರಾಜ್ಯದ ಸಾಕಷ್ಟು ಕಡೆಗಳಲ್ಲಿ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !