Wednesday, September 24, 2025

ಕನ್ನಡ ಸಿನಿಮಾಗಳಾಗಿವೆ ಎಸ್‌.ಎಲ್ ಭೈರಪ್ಪನವರ ಈ ಕಾದಂಬರಿಗಳು..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸರಸ್ವತಿ ಸಮ್ಮಾನ್, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ, ಎಸ್ಎಲ್ ಬೈರಪ್ಪ (94) ಇಂದು ನಿಧನರಾದರು.

ಕನ್ನಡ ಸಾಹಿತ್ಯ ಲೋಕದ ಅಕ್ಷರ ಮಾಂತ್ರಿಕನಾದ ಎಸ್‌ಎಲ್‌ ಭೈರಪ್ಪ ಅವರ ಕಾದಂಬರಿಗಳು ಇಂದಿಗೂ ಜನಮಾನಸದಲ್ಲಿ ಅಚ್ಚಾಗಿದೆ. ಅವರ ಕಾದಂಬರಿಗಳನ್ನು ಧಾರಾವಾಹಿ ಹಾಗೂ ಸಿನಿಮಾಗಳ ಮೂಲಕ ಜನರಿಗೆ ಮುಟ್ಟಿಸುವ ಕೆಲಸ ನಡೆದಿದೆ.

ಗೃಹ ಭಂಗ ಕಾದಂಬರಿ ಧಾರಾವಾಹಿಯಾಗಿದ್ದರೆ, ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ ಕಾದಂಬರಿಗಳು ಸಿನಿಮಾಗಳಾಗಿವೆ. ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ, ಮತದಾನ ಕಾದಂಬರಿಗಳು ಚಲನಚಿತ್ರವಾಗಿ ಪ್ರಶಸ್ತಿ ಗಳಿಸಿವೆ. ವಂಶವೃಕ್ಷಕ್ಕೆ 1966 ರಲ್ಲಿ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 1975ರಲ್ಲಿ ದಾಟು ಕಾದಂಬರಿಗೆ ರಾಜ್ಯ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ.

`ಪರ್ವ’ ಭೈರಪ್ಪನವರು ರಚಿಸಿದ ಕಾದಂಬರಿಗಳಲ್ಲೇ ಭಾರೀ ಚರ್ಚೆಗೆ ಒಳಗಾದದ್ದು, ಮಹಾಭಾರತ ಕಾಲದ ಭಾರತೀಯ ಸಮಾಜದ ರೀತಿ ನೀತಿಗಳನ್ನೂ, ಆ ಕಾಲದ ಜೀವನ ಮೌಲ್ಯಗಳನ್ನು, ಮೃತ್ಯುವಿನ ರಹಸ್ಯಾತ್ಮಕತೆಯನ್ನು ಕಾದಂಬರಿಯಲ್ಲಿ ಅರ್ಥಪೂರ್ಣವಾಗಿ ಬಿಂಬಿಸಲಾಗಿದೆ.

ಇದನ್ನೂ ಓದಿ