Wednesday, September 24, 2025

ಜನಮಾನಸದಲ್ಲಿ ಅಚ್ಚಾಗಿ ಉಳಿದಿವೆ ಭೈರಪ್ಪನವರ ಈ ಅದ್ಭುತ ಕಾದಂಬರಿಗಳು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

 ಪದ್ಮಭೂಷಣ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.  ವಯೋಸಹಜ ಕಾಯಿಲೆ ಬಳಲುತ್ತಿದ್ದ ಬೈರಪ್ಪ ಅವರು ಮರುವಿನ ಕಾಯಿಲೆ ಸಹ ಇತ್ತು. 

94 ವರ್ಷದ ಹಿರಿಯ ಸಾಹಿತಿ ಎಸ್​ ಎಲ್​ ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಲೇಖಕರಾಗಿದ್ದು, 2023ರಲ್ಲಿ ಇವರಿಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು. ಭೈರಪ್ಪನವರ ಕಾದಂಬರಿಗಳು ಇಂದಿಗೂ ಪ್ರಸ್ತುತ. ಓದುಗರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದ ಕಾದಂಬರಿಗಳಿವು..

ಭೀಮಕಾಯ(1952), ಬೆಳಕು ಮೂಡಿತು(1959), ಧರ್ಮಶ್ರೀ – (1961), ದೂರ ಸರಿದರು(1967), ಮತದಾನ (1965), ವಂಶವೃಕ್ಷ(1965), ಜಲಪಾತ (1967), ನಾಯಿ ನೆರಳು (1968), ತಬ್ಬಲಿಯು ನೀನಾದೆ ಮಗನೆ(1968), ಗೃಹಭಂಗ(1970), ನಿರಾಕರಣ-(1971), ಗ್ರಹಣ-(1972), ದಾಟು (1973), ಅನ್ವೇಷಣ(1976), ಪರ್ವ(1979), ನೆಲೆ (1983), ಸಾಕ್ಷಿ (1986) ಅಂಚು-(1990), ತಂತು (1993), ಸಾರ್ಥ(1998), ಮಂದ್ರ(2001), ಆವರಣ(2007), ಕವಲು (2010), ಯಾನ (2014) ಉತ್ತರಕಾಂಡ-(2017)

ಭೈರಪ್ಪ ಅವರು ಕಾದಂಬರಿಗಳಲ್ಲದೆ ಸೌಂದರ್ಯಮೀಮಾಂಸೆ, ತತ್ವಶಾಸ್ತ್ರದ ಕುರಿತು ಅನೇಕ ಗ್ರಂಥಗಳನ್ನು ರಚಿಸಿದ್ದಾರೆ. ಪ್ರಮುಖ ಕೃತಿಗಳೆಂದರೇ, ವಂಶವೃಕ್ಷ, ದಾಟು, ತಂತು, ಅಂಚು, ಪರ್ವ, ಗೃಹಭಂಗ, ಅನ್ವೇಷಣ, ಮಂದ್ರ, ಸಾರ್ಥ, ನಾಯಿನೆರಳು, ಧರ್ಮಶ್ರೀ, ದೂರಸರಿದರು, ಮತದಾನ ಮುಂತಾದವು ಅವರ ಕಾದಂಬರಿಗಳಾಗಿವೆ.

ಇದನ್ನೂ ಓದಿ