ಹೊಸದಿಗಂತ ಡಿಜಿಟಲ್ ಡೆಸ್ಕ್:
ದಾಖಲೆ ಸಹಿತ ಆರೋಪ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತಿಗೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಉತ್ತರ ನೀಡಿದ್ದಾರೆ.
ಪತ್ರಿಕೆಯೊಂದರಲ್ಲಿ ಪ್ರಕಟವಾಗಿರುವ ಗುತ್ತಿಗೆದಾರರ ಬಿಲ್ ಬಾಕಿ ಮೊತ್ತ ಸುದ್ದಿಯನ್ನು ಟ್ವೀಟ್ ಮಾಡಿರುವ ಅವರು, “ದಾಖಲೆ ಕೊಡಿ.. ದಾಖಲೆ ಕೊಡಿ ಎನ್ನುತ್ತಿದ್ದೀರಿ.. ಇಲ್ನೋಡಿ ಸಿದ್ದರಾಮಯ್ಯನವರೇ.. ನಿಮ್ಮ ಗ್ಯಾರಂಟಿ ಸರಕಾರದ ಲೂಟಿ ಸಾಕ್ಷಿಗುಡ್ಡೆ” ಎಂದು ವಾಗ್ದಾಳಿ ನಡೆಸಿದ್ದಾರೆ.
“ನಿಮ್ಮ ಸರಕಾರ ಗುತ್ತಿಗೆದಾರರನ್ನು ಎಷ್ಟು ನಿರ್ಲಜ್ಜವಾಗಿ ಸುಲಿಗೆ ಮಾಡುತ್ತಿದೆ ಎನ್ನುವುದಕ್ಕೆ ಈ ಸಾಕ್ಷಿಗುಡ್ಡೆ ಸಾಕ್ಷ್ಯ ಸಾಲದೇ ಮುಖ್ಯಮಂತ್ರಿಗಳೇ? ಗ್ಯಾರಂಟಿ ಹೆಸರಿನಲ್ಲಿ ಬಿಡಿಗಾಸು ಕೊಟ್ಟು ಕೋಟಿ ಕೋಟಿ ಲೂಟಿ ಮಾಡುತ್ತಿದ್ದೀರಿ” ಎಂದು ತಿರುಗೇಟು ನೀಡಿದ್ದಾರೆ.