July 2, 2026
Thursday, July 2, 2026
spot_img

ಭಿಕ್ಷೆ ಬೇಡುವ ನೆಪದಲ್ಲಿ ಬಂದು ಖಾರದಪುಡಿ ಎರಚಿ ಮಾಂಗಲ್ಯ ಸರ ದೋಚಿ ಪರಾರಿ

ಹೊಸದಿಗಂತ ವರದಿ ತುಮಕೂರು:

ಭಿಕ್ಷೆ ಬೇಡುವ ನೆಪದಲ್ಲಿ ಮನೆ ಬಾಗಿಲಿಗೆ ಬಂದ ಅಪರಿಚಿತ ಮಹಿಳೆಯೊಬ್ಬಳು ಶಿಕ್ಷಕಿಯ ಕಣ್ಣಿಗೆ ಕಾರದ ಪುಡಿ ಎರಚಿ, ಸುಮಾರು ನಾಲ್ಕು ಲಕ್ಷ ರೂಪಾಯಿ ಮೌಲ್ಯದ ಮಾಂಗಲ್ಯ ಸರ ದೋಚಿ ಪರಾರಿಯಾಗಿರುವ ಘಟನೆ ತಾಲೂಕಿನ ತಿಮ್ಲಾಪುರ ಗ್ರಾಮದಲ್ಲಿ ನಡೆದಿದೆ.

ಶಿಕ್ಷಕಿ ಚಂದ್ರಮ್ಮ ಅವರು ಮನೆಯಲ್ಲಿ ಒಬ್ಬರೇ ಇದ್ದ ವೇಳೆ, ಅಮ್ಮಾ ಊಟ ಕೊಡಿ ಎಂದು ಮನೆ ಬಾಗಿಲಿಗೆ ಬಂದಿದ್ದ ಮಹಿಳೆ ಮನೆಯ ಪರಿಸ್ಥಿತಿಯನ್ನು ಗಮನಿಸಿದ್ದಾಳೆ. ಬಳಿಕ ಏಕಾಏಕಿ ಚಂದ್ರಮ್ಮ ಅವರ ಕಣ್ಣಿಗೆ ಕಾರದ ಪುಡಿ ಎರಚಿ ಹಲ್ಲೆ ನಡೆಸಿ, ಅವರ ಕುತ್ತಿಗೆಯಲ್ಲಿದ್ದ 80 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿತ್ತು ಪರಾರಿಯಾಗಿದ್ದಾಳೆ.

ಈ ಘಟನಾ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಕಳೆದ 20 ದಿನಗಳಲ್ಲಿ ಜಿಲ್ಲೆಯಲ್ಲಿ ಇದೇ ರೀತಿಯ ಇದು ಮೂರನೇ ಸರ ದರೋಡೆ ಪ್ರಕರಣವಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !