Thursday, January 8, 2026

ಪ್ರೀತಿಸಿ ಮದುವೆಯಾದರು…ಹಸುಗೂಸು ಸಹಿತ 3 ಹೆಣ್ಮಕ್ಕಳನ್ನು ಪತ್ನಿ ಕೈಗಿಟ್ಟು ಪತಿ ಪರಾರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೂವರು ಹೆಣ್ಣುಮಕ್ಕಳು ಎನ್ನುವ ಕಾರಣಕ್ಕೆ ಒಂದೂವರೆ ತಿಂಗಳ ಹಸುಗೂಸನ್ನೇ ಬಿಟ್ಟು ಪತ್ನಿಗೆ ಕೈಕೊಟ್ಟು ಪತಿ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ .

ಹರೀಶ್, ಪತ್ನಿಗೆ ಕೈಕೊಟ್ಟು ಪರಾರಿಯಾದ ವ್ಯಕ್ತಿ.

ಹರೀಶ್ ಮೂಲತಃ ರಾಜಸ್ಥಾನದವನಾಗಿದ್ದು, ಬೆಂಗಳೂರಿನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಕೆಲಸ ಮಾಡುತ್ತಿದ್ದಾನೆ. ಈತ ವರಲಕ್ಷ್ಮೀ ಎಂಬ ಸ್ಟಾಫ್ ನರ್ಸ್​ನ ಪ್ರೀತಿಸಿ ಮದುವೆ ಆಗಿದ್ದ. ಬಳಿಕ ಕುಟುಂಬಸ್ಥರನ್ನು ಒಪ್ಪಿಸಿ ಮದುವೆಯಾಗಿದ್ದ. ಹೊಸದರಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಆದರೆ, ಈ ಜೋಡಿಗೆ ಹುಟ್ಟಿದ ಮೂವರು ಮಕ್ಕಳು ಕೂಡ ಹೆಣ್ಣು. ಇದು ಹರೀಶ್​ನ ಅಸಮಾಧಾನಕ್ಕೆ ಕಾರಣವಾಗಿದೆ. ಮೊದಲ ಇಬ್ಬರು ಮಕ್ಕಳು ಹೆಣ್ಣು ಎಂದು ಗೊತ್ತಾದಾಗ ಮೂರನೇಯ ಬಾರಿಗೆ ಗಂಡು ಹುಟ್ಟಬಹುದು ಎಂಬ ಆಸೆಯಲ್ಲಿದ್ದ. ಇದೀಗ ಹರೀಶ್ ಪತ್ನಿ ವಿಜಯಲಕ್ಷ್ಮೀ, ಕಳೆದ ಒಂದೂವರೆ ತಿಂಗಳ ಹಿಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಇದೀಗ ಒಂದೂವರೆ ತಿಂಗಳ ಹಸಗೂಸು ಹಾಗೂ ಇಬ್ಬರು ಮಕ್ಕಳನ್ನ ಪತ್ನಿಯ ಮಡಿಲಿಗೆ ಹಾಕಿ ಪರಾರಿಯಾಗಿದ್ದಾನೆ.

ಪತಿ ಕೈಕೊಟ್ಟ ಬೆನ್ನಲ್ಲೇ ಪತ್ನಿ ವರಲಕ್ಷ್ಮೀ ಆತನ ವಿರುದ್ಧ ಗಂಭೀರ ಆರೋಪ ಮಾಡಿದ್ದಾಳೆ. ಮೂವರು ಹೆಣ್ಮಕ್ಕಳು ಎಂದು ನಮ್ಮನ್ನು ಬಿಟ್ಟು ಹೋಗಿ ಮತ್ತೊಂದು ಮಹಿಳೆ ಜೊತೆ ವಾಸವಿದ್ದಾನೆ. ಈಗ ನನಗೆ ಮೂವರು ಮಕ್ಕಳನ್ನು ಸಾಕೋದಕ್ಕೆ ಆಗುತ್ತಿಲ್ಲ. ಮಕ್ಕಳ ಶಾಲಾ ಫೀಸ್, ಮನೆ ಬಾಡಿಗೆ ಕಟ್ಟಲೂ ಕೂಡ ಆಗುತ್ತಿಲ್ಲ. ಇದೀಗ ಹುಟ್ಟಿರುವ ಹಸುಗೂಸನ್ನ ಆರೈಕೆ ಮಾಡೋದೇ ಕಷ್ಟವಾಗಿದೆ ಎಂದು ಆರೋಪಿಸಿ ಈಶಾನ್ಯ ವಿಭಾಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

error: Content is protected !!