ಟಾಯ್ಲೆಟ್‌ಗೆ ಹೋಗಿ ಬಂದ ಮಗುವನ್ನು ತೊಳೆಯುವಾಗ ಕುದಿಯುವ ನೀರು ಹಾಕಿಬಿಟ್ರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಟಾಯ್ಲೆಟ್‌ಗೆ ಹೋಗಿ ಮಲವಿಸರ್ಜನೆ ಮಾಡಿಬಂದ ಮಗುವಿಗೆ ಹಿಂಬದಿಗೆ ಕುದಿಯುವ ನೀರನ್ನು ಹಾಕಲಾಗಿದೆ. ಇದರಿಂದ ಕಂದಮ್ಮನ ಹಿಂಬದಿ, ತೊಡೆ, ಕಾಲು ಎಲ್ಲವೂ ಸುಟ್ಟುಹೋಗಿದೆ.

ಚಿಕ್ಕಮಗಳೂರಿನಲ್ಲಿ ಶಿಶು ಆರೈಕಾ ಸಿಬ್ಬಂದಿ ಎಡವಟ್ಟಿನಿಂದಾಗಿ ಹೆಣ್ಣು ಮಗುವೊಂದು ನರಳುವಂತಾಗಿದೆ. ಒಂದು ವರ್ಷ ಮೂರು ತಿಂಗಳ ಹೆಣ್ಣು ಮಗುವಿನ ಮೇಲೆ ಸಿಬ್ಬಂದಿ ಕುದಿಯುವ ಬಿಸಿ ನೀರು ಸುರಿದ ಪರಿಣಾಮ ಸೊಂಟದ ಕೆಳಭಾಗ ಸಂಪೂರ್ಣ ಸುಟ್ಟು ಹೋಗಿದೆ. ಮಲ ವಿಸರ್ಜನೆ ಮಾಡಿದ್ದ ಮಗುವನ್ನು ಸ್ವಚ್ಛ ಮಾಡುವಾಗ ದುರ್ಘಟನೆ ಸಂಭವಿಸಿದೆ.

ದತ್ತು ಸಂಸ್ಥೆ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಅಡಿಯಲ್ಲಿ ಈ ಜಾಗ ಬರಲಿದೆ. ಅನಾಥ ಮಕ್ಕಳನ್ನು ರಕ್ಷಣೆ ಮಾಡಿ ಆರೈಕೆ ಮಾಡುವ ಜವಾಬ್ದಾರಿ ಹೊಂದಿದೆ. ಆದರೆ ಸಿಬ್ಬಂದಿಗಳ ಬೇಜವಾಬ್ದಾರಿಗೆ ಮಗು ನರಳಾಡುವಂತಾಗಿದೆ. ಹೆಣ್ಣು ಮಗುವನ್ನ ದತ್ತು ಪಡೆಯಲು ಪೋಷಕರು ಸಿದ್ದತೆ ನಡೆಸಿದ್ದರು. ಅಷ್ಟರಲ್ಲಿ ಸಿಬ್ಬಂದಿಯಿಂದ ಎಡವಟ್ಟಾಗಿದೆ. ಜುಲೈ 09 ರಂದು ಘಟನೆ ನಡೆದಿದ್ದು, ಇಡೀ ಪ್ರಕರಣ ಮೇಲಧಿಕಾರಿಗಳಿಗೆ ತಿಳಿಯದಂತೆ ಸಿಬ್ಬಂದಿ ಮುಚ್ಚಿಟ್ಟಿದ್ದಾರೆ.

ಸದ್ಯ ಚಿಕ್ಕಮಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾ ಮಕ್ಕಳ‌ ರಕ್ಷಣಾ ಘಟಕದ ದತ್ತು ಸಂಸ್ಥೆ ಸಿಬ್ಬಂದಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!