ಹೊಸದಿಗಂತ ಡಿಜಿಟಲ್ ಡೆಸ್ಕ್:
ನವವಿವಾಹಿತೆ ಘನವಿ ಆತ್ಮಹತ್ಯೆ ಪ್ರಕರಣ ಮಹತ್ತರ ತಿರುವು ಪಡೆದಿದ್ದು, ಆಕೆಯನ್ನು ಮದುವೆಯಾಗಿದ್ದ ಸೂರಜ್ ಗಂಡಸೇ ಅಲ್ಲ ಎಂದು ಆಕೆಯ ಪೋಷಕರು ಆರೋಪಿಸಿದ್ದಾರೆ.
ಬೆಂಗಳೂರಿನ ರಾಮಮೂರ್ತಿನಗರದಲ್ಲಿ ನವ ವಿವಾಹಿತೆ ಘಾನವಿ ಮದುವೆಯಾದ ಕೇವಲ ಒಂದೂವರೆ ತಿಂಗಳಿಗೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಪ್ರಕರಣ ವರದಕ್ಷಿಣೆ ಕಿರುಕುಳ ಮತ್ತು ಮಾನಸಿಕ ಹಿಂಸೆಯ ಆರೋಪಕ್ಕೆ ಸಂಬಂಧಿಸಿದೆ ಎಂದು ಆರೋಪಿಸಲಾಗಿದೆ.
ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್‌ನಲ್ಲಿ ಅದ್ದೂರಿ ರಿಸೆಪ್ಷನ್ ಮಾಡಿಕೊಂಡು ಶ್ರೀಲಂಕಾಕ್ಕೆ ಹನಿಮೂನ್ ಹೋಗಿದ್ದ ನವದಂಪತಿ ಅರ್ಧದಲ್ಲೇ ಮನೆಗೆ ವಾಪಸ್ಸಾಗಿದ್ದು, ಬಳಿಕ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಅಕ್ಟೋಬರ್ 29ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟು, ಪ್ಯಾಲೆಸ್ ಗ್ರೌಂಡ್‌ನಲ್ಲಿ ಅದ್ದೂರಿಯಾಗಿ ರಿಸೆಪ್ಷನ್ ಮಾಡಿಕೊಂಡಿದ್ದರು.
ಕಳೆದ ಹತ್ತು ದಿನಗಳ ಹಿಂದೆ ಶ್ರೀಲಂಕಾಗೆ ಹನಿಮೂನ್‌ಗೆಂದು ಹೋಗಿದ್ದರು. ಆದ್ರೆ, ಅಲ್ಲಿ ಅದೇನಾಯ್ತೋ ಏನೋ ಅರ್ಧಕ್ಕೆ ಶ್ರೀಲಂಕಾದಿಂದ ಇಬ್ಬರು ವಾಪಸ್ಸಾಗಿದ್ದರು. ಬಳಿಕ ನೇಣಿಗೆ ಹಾಕಿಕೊಳ್ಳಲು ಯತ್ನಿಸಿದ್ದಾರೆ. ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

