March 11, 2026
Wednesday, March 11, 2026
spot_img

ಹಲವು ಬಾರಿ ನನ್ನನ್ನು ಮಾತನಾಡದಂತೆ ತಡೆದರು: ಲೋಕಸಭೆಯಲ್ಲಿ ರಾಹುಲ್ ಗಾಂಧಿ ಟೀಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧದ ಅವಿಶ್ವಾಸ ನಿರ್ಣಯದ ಕುರಿತ ಚರ್ಚೆಯಲ್ಲಿ ಇಂದು ಭಾಗವಹಿಸಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ತಮ್ಮನ್ನು ಹಲವು ಬಾರಿ ಮಾತನಾಡದಂತೆ ತಡೆಯಲಾಗಿದೆ ಎಂದು ಟೀಕಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ. ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನರವಾಣೆ ಹಾಗೂ ಜೆಫ್ರಿ ಎಪ್ಸ್ಟೈನ್ ಗೆ ಸಂಬಂಧಿಸಿದ ವಿಷಯಗಳನ್ನು ಉಲ್ಲೇಖಿಸಿದಾಗ ಚರ್ಚೆಯನ್ನು ಮುಂದುವರಿಸಲು ನನ್ನನ್ನು ಕಳೆದ ಬಾರಿ ತಡೆದರು ಎಂದು ಆರೋಪಿಸಿದರು.

ನಾನು ಇಲ್ಲಿ ಪ್ರಜಾಪ್ರಭುತ್ವ ಪ್ರಕ್ರಿಯೆ ಮತ್ತು ಸ್ಪೀಕರ್ ಪಾತ್ರದ ಬಗ್ಗೆ ಮಾತುನಾಡುತ್ತಿದೇನೆ. ಆದರೆ ಹಲವು ಬಾರಿ, ನನ್ನ ಹೆಸರನ್ನು ಎತ್ತಲಾಗುತ್ತಿದೆ, ನನ್ನ ಬಗ್ಗೆ ಕೆಟ್ಟ ವಿಷಯಗಳನ್ನು ಹೇಳಲಾಗುತ್ತಿದೆ. ಈ ಸದನವು ಜನರ ಇಚ್ಛೆಯ ಅಭಿವ್ಯಕ್ತಿಯಾಗಿದೆ. ಈ ಸದನವು ಒಂದು ಪಕ್ಷವನ್ನು ಪ್ರತಿನಿಧಿಸುವುದಿಲ್ಲ, ಅದು ಇಡೀ ದೇಶವನ್ನು ಪ್ರತಿನಿಧಿಸುತ್ತದೆ ಎಂದು ಹೇಳಿದರು.

ನಾನು ಕೊನೆಯ ಬಾರಿ ಮಾತನಾಡುವಾಗ, ನಮ್ಮ ಪ್ರಧಾನಿ ಮಾಡಿಕೊಂಡ ರಾಜಿ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದೇನೆ. ಹಲವು ಬಾರಿ, ನನ್ನನ್ನು ಮಾತನಾಡದಂತೆ ತಡೆಯಲಾಗಿದೆ. ಕೆಲವೇ ದಿನಗಳ ಹಿಂದೆ, ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ, ವಿರೋಧ ಪಕ್ಷದ ನಾಯಕನಿಗೆ ಚರ್ಚೆಯ ಸಮಯದಲ್ಲಿ ಮಾತನಾಡಲು ಅವಕಾಶ ನೀಡಲಾಗಿಲ್ಲ ಎಂದು ರಾಹುಲ್ ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !