ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣ, ವಾಲ್ಮೀಕಿ ಹಗರಣ ಆಗಿದೆ. ತಮ್ಮ ತಪ್ಪುಗಳನ್ನ ಮುಚ್ಚಿಕೊಳ್ಳಲು, ವಿಷಯ ಡೈವರ್ಟ್ ಮಾಡಲು ವಿಪಕ್ಷ ನಾಯಕರನ್ನ ಟಾರ್ಗೆಟ್ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರಿಗೆ ಅಭದ್ರತೆ ಕಾಡುತ್ತಿದೆ. ಮುಡಾ ಹಗರಣ , ವಾಲ್ಮೀಕಿ ಹಗರಣ ಆಗಿದೆ. ಸರ್ಕಾರದ ಮೇಲೆ ಭ್ರಷ್ಟಾಚಾರ ಆರೋಪಗಳು ಕೇಳಿಬರ್ತಿವೆ. ಭ್ರಷ್ಟಾಚಾರ ಮುಕ್ತ ಆಡಳಿತ ಕೊಡಲು ಈ ಸರ್ಕಾರ ವಿಫಲವಾಗಿದೆ.
ರಾಜ್ಯದ ಜನರಿಗೆ ಗೊತ್ತಿದೆ. ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ. ತಮ್ಮ ತಪ್ಪುಗಳನ್ನ ಮುಚ್ಚಿಕೊಳ್ಳಲು, ವಿಷಯ ಡೈವರ್ಟ್ ಮಾಡಲು ವಿಪಕ್ಷ ನಾಯಕರನ್ನ ಟಾರ್ಗೆಟ್ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಸಮಾಜ ವಿರೋಧಿ ಚಟುವಟಿಕೆಗಳಿಗೆ ಬೆಂಬಲ ಕೊಡ್ತಿದ್ದಾರೆ ಎಂದರು.