ಮನೆಯ ಆವರಣದಲ್ಲಿ ಒಣಗಿಹಾಕಿದ್ದ ಲೇಡೀಸ್‌ ಇನ್ನರ್‌ವೇರ್ಸ್‌ ಕದಿಯುತ್ತಿದ್ದ ಕಳ್ಳ ಅರೆಸ್ಟ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾತ್ರಿ ವೇಳೆ ಮನೆಯ ಆವರಣಕ್ಕೆ ನುಗ್ಗಿ ಒಣಗಿಸಿದ್ದ ಮಹಿಳೆಯರ ಒಳ ಉಡುಪನ್ನು ಕಳ್ಳತನ ಮಾಡುತ್ತಿದ್ದ ಸೈಕೋ ಒಬ್ಬನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಹುಬ್ಬಳ್ಳಿಯ ನೇಕಾರ ನಗರದಲ್ಲಿ ನಡೆದಿದೆ.

ಕಳೆದ ಕೆಲವು ದಿನಗಳಿಂದ ನಗರದ ಹಲವು ಮನೆಗಳ ಹೊರಗೆ ಒಣಗಿಸಿದ್ದ ಮಹಿಳೆಯರ ಒಳ ಉಡುಪುಗಳು ನಾಪತ್ತೆಯಾಗುತ್ತಿದ್ದವು. ಅಲ್ಲದೇ ಕೆಲವು ಮನೆಗಳಲ್ಲಿ ಹಣ ಕೂಡಾ ಕಳ್ಳತನ ಆಗುತ್ತಿತ್ತು. ಹೀಗಾಗಿ ಕೆಲವರು ತಮ್ಮ ತಮ್ಮ ಮನೆಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಿಡಿದ್ದರು.

ಗುರುವಾರ ಮಧ್ಯರಾತ್ರಿ ಸೈಕೋ ಕಳ್ಳ ಮನೆಯೊಂದರ ಮುಂದಿನ ಗೇಟ್ ಹಾರಿ ಬಂದು, ಒಳ ಉಡುಪುಗಳನ್ನು ಕಳ್ಳತನ ಮಾಡಲು ಯತ್ನಿಸಿದ್ದ. ಈ ವೇಳೆ ಸಿಸಿ ಕ್ಯಾಮೆರಾದಲ್ಲಿ ಈ ದೃಶ್ಯ ಕಂಡ ಮನೆಯವರು ಏರಿಯಾ ನಿವಾಸಿಗಳಿಗೆ ಮಾಹಿತಿ ನೀಡಿದ್ದರು. ಬಳಿಕ ಸ್ಥಳೀಯರೆಲ್ಲ ಸೇರಿ ಕಳ್ಳನನ್ನು ಹಿಡಿದು ಥಳಿಸಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!