Monday, September 8, 2025

ಕೆಂಪು ಕೋಟೆಯಲ್ಲಿ ಕೋಟಿ ರೂ. ಮೌಲ್ಯದ ಕಲಶ ಕದ್ದೊಯ್ದ ಕಳ್ಳ ಅರೆಸ್ಟ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಐತಿಹಾಸಿಕ ಕೆಂಪು ಕೋಟೆ ಆವರಣದಲ್ಲಿ ನಡೆದ ಜೈನರ ಧಾರ್ಮಿಕ ಕಾರ್ಯಕ್ರಮದಲ್ಲಿ ಎರಡು ಚಿನ್ನದ ಕಲಶವನ್ನು ಕಳ್ಳತನ ಮಾಡಿದ ಆರೋಪಿಯನ್ನು ಉತ್ತರ ಪ್ರದೇಶದ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಹಾಪುರ್ ನಿವಾಸಿ ಭೂಷಣ್ ವರ್ಮಾ ಎಂದು ಗುರುತಿಸಲಾಗಿದೆ. ಆರೋಪಿಯು ಜೈನ್ ಧರ್ಮದ ಧಾರ್ಮಿಕ ಕಾರ್ಯಕ್ರಮದಲ್ಲಿ 1.5 ಕೋಟಿ ಮೌಲ್ಯದ ವಜ್ರ, ರತ್ನ ಖಚಿತ ಕಲಶವನ್ನು ಕಳವು ಮಾಡಿದ್ದ. 

ಜೈನ ಅರ್ಚಕನ ವೇಷದಲ್ಲಿ ಬಂದ ಆರೋಪಿ ಬೆಲೆಬಾಳುವ ವಸ್ತುಗಳನ್ನ ದೋಚಿದ್ದ. ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲೂ ವೈರಲ್ ಆಗಿತ್ತು.

ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿ, ಬಿಎನ್‌ಎಸ್ ಸೆಕ್ಷನ್ 303 (2)ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ