ದಿಗಂತ ವರದಿ ಮಂಗಳೂರು:
ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಶಾಪ್ ನಿಂದ ಚಿನ್ನ ಎಗರಿಸಿ ಪರಾರಿಯಾಗುತ್ತಿದ್ದ ಖದೀಮನನ್ನು ಜ್ಯುವೆಲ್ಲರಿ ಮಾಲಕನೇ ಹಿಡಿದ ಘಟನೆ ನಗರದ ಕಾರ್ ಸ್ಟ್ರೀಟ್ ನಲ್ಲಿರುವ ಜ್ಯುವೆಲ್ಲರಿ ಶಾಪ್ ಒಂದರಲ್ಲಿ ನಡೆದಿದೆ.
ಅರುಣ್ ಜಿ ಶೇಟ್ ಅವರ ಅಂಗಡಿಗೆ ನುಗ್ಗಿದ ಕಳ್ಳ ಚಿನ್ನ ಖರೀದಿಸುವ ನಾಟಕವಾಡಿ ಚಿನ್ನದ ಉಂಗುರವನ್ನು ಬಾಯೊಳಗೆ ಹಾಕಿ ಪರಾರಿಯಾಗಿದ್ದಾನೆ. ಇದನ್ನು ಗಮನಿಸಿದ ಅರುಣ್ ಜಿ ಶೇಟ್ ಆತನನ್ನು ಬೆನ್ನಟ್ಟಿ ಸಾರ್ವಜನಿಕರ ಸಹಾಯದಿಂದ ಹಿಡಿದಿದ್ದಾರೆ.
ಈ ದೃಶ್ಯ ಸಿಸಿ ಕ್ಯಾಮರಾದಲ್ಲಿಯೂ ಸೆರೆಯಾಗಿದೆ.
ಬಳಿಕ ಈ ಬಗ್ಗೆ ಪೊಲೀಸ್ ದೂರು ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.