ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಆಭರಣ ಕದ್ದ ಕಳ್ಳರು

ಹೊಸದಿಗಂತ ವರದಿ ಕಾರವಾರ:

ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬಾಗಿಲ ಇಂಟರ್ ಲಾಕ್ ಮುರಿದು ಮನೆಯೊಳಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿರುವ ಘಟನೆ ಇಲ್ಲಿನ ನಗರ ವ್ಯಾಪ್ತಿಯ ವಿಜಯನಗರ ಕುರ್ಸವಾಡದಲ್ಲಿ ನಡೆದಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಡಿ.ಸಿ.ಆರ್. ಬಿ ವಿಭಾಗದಲ್ಲಿ ಎ.ಎಸ್. ಐ ಆಗಿರುವ
ಕುರ್ಸವಾಡ ನಿವಾಸಿ ಸ್ಮೀತಾ ಪಾವಸ್ಕರ್ ಅವರ ಮನೆಯಲ್ಲಿ ಕಳ್ಳತನ ನಡೆಸಲಾಗಿದ್ದು ಫೆಬ್ರವರಿ 1 ರ ಬೆಳಿಗ್ಗೆ 7.30 ರಿಂದ ಫೆಬ್ರವರಿ 2 ರ ಸಂಜೆ 7.20 ರ ಅವಧಿಯಲ್ಲಿ ಕಳ್ಳತನ ನಡೆಸಲಾಗಿದೆ.

ಬಾಗಿಲ ಇಂಟರ್ ಲಾಕ್ ಮುರಿದು ಮನೆಯೊಳಗೆ ನುಗ್ಗಿರುವ ಕಳ್ಳರು ಒಳಗೆ ಪ್ರವೇಶಿಸಿ ಬೆಡ್ ರೂಮಿನಲ್ಲಿ ಇರುವ ಟ್ರಜರಿ ಒಡೆದು ಲಾಕರ್ ನಲ್ಲಿದ್ದ 18.85 ಲಕ್ಷ ಮೌಲ್ಯದ 357 ಗ್ರಾಂ ಬಂಗಾರದ ಆಭರಣಗಳನ್ನು
ಸುಮಾರು 72 ಗ್ರಾಂ ಬೆಳ್ಳಿ ಸಾಮಗ್ರಿಗಳು ಮತ್ತು 10 ಸಾವಿರ ರೂಪಾಯಿ ನಗದು ದೋಚಿದ್ದಾರೆ.

ಈ ಕುರಿತು ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಜಿಲ್ಲಾ ಪೊಲೀಸ್ ವರಿಷ್ಠ ಎಂ ನಾರಾಯಣ ಪಾಲ್ಗೊಳ್ಳಲಿದ್ದಾರೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ಕುರಿತಂತೆ ತನಿಖೆ ಕೈಗೊಂಡಿರುವ ಪೊಲೀಸರು ಕಳ್ಳತನದ ಕೃತ್ಯದಲ್ಲಿ ಭಾಗಿಯಾಗಿರುವುದಾಗಿ ಕಂಡು ಬಂದ ವ್ಯಕ್ತಿಯ ಭಾವಚಿತ್ರ ಬಿಡುಗಡೆ ಮಾಡಿದ್ದು ವ್ಯಕ್ತಿಯ ಕುರಿತು ಮಾಹಿತಿ ದೊರಕಿದರೆ
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠರು, ಡಿ.ವೈ.ಎಸ್. ಪಿ, ಕಾರವಾರ ಶಹರ ಪೊಲೀಸ್ ಠಾಣೆ ಅಥವಾ ಪೊಲೀಸ್ ಕಂಟ್ರೋಲ್ ರೂಮಿಗೆ ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!