ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳ್ಳರು ತಮ್ಮ ಕೈ ಚಳಕ ತೋರಿಸಿ ಒಂದೇ ರಾತ್ರಿಯಲ್ಲಿ 6 ಮನೆಗಳಿಗೆ ಕನ್ನ ಹಾಕಿ 4.87 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಕಲುಬುರಗಿಯ ಆಳಂದ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಬುಧವಾರ ತಡರಾತ್ರಿ ಗ್ರಾಮದ ಬಸವರಾಜ ಬಿರಾದಾರ್ ಎಂಬುವವರು ಮಹಾರಾಷ್ಟ್ರದ ಸಂಬಂಧಿಕರ ಮನೆಗೆ ಹೋಗಿದ್ದರು. ಈ ವೇಳೆ ಅವರ ಮನೆಯ ಅಲ್ಮೇರಾದಲ್ಲಿದ್ದ 4.87 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಕಳವು ಮಾಡಿದ್ದಾರೆ. ಅದೇ ರೀತಿ ಬೆಂಗಳೂರಿಗೆ ವಲಸೆ ಹೋಗಿರುವ ಐದು ಮನೆಗಳ ಬೀಗ ಮುರಿದು ಚಿನ್ನಾಭರಣ ದೋಚಿದ್ದಾರೆ. ಬಳಿಕ ಮನೆಗಳಲ್ಲಿನ ಸಾಮಗ್ರಿಗಳನ್ನು ಎಲ್ಲೆಂದರಲ್ಲಿ ಎಸೆದು ಖದೀಮರು ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಸಿಪಿಐ ಪ್ರಕಾಶ್ ಯಾತನೂರು, ಪಿಎಸ್ಐ ಸಿದ್ದರಾಮ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.