Wednesday, August 17, 2022

Latest Posts

ಮಹಿಳೆಯ ಮಾಂಗಲ್ಯ ಸರ ಕಿತ್ತುಕೊಂಡು ಖದೀಮರು ಪರಾರಿ: ಪ್ರಕರಣ ದಾಖಲು

ಹೊಸದಿಗಂತ ವರದಿ, ಮೈಸೂರು:

ಸರಗಳ್ಳರ ಹಾವಳಿ ಈಗ ಗ್ರಾಮೀಣ ಪ್ರದೇಶಕ್ಕೂ ವಿಸ್ತರಿಸಿದೆ. ಮೈಸೂರು ತಾಲೂಕು ಜಯಪುರ ಹೋಬಳಿ ವ್ಯಾಪ್ತಿಯ ಕೆ.ಮಾದಳ್ಳಿ ಮತ್ತು ಅನಗಳ್ಳಿ ಗ್ರಾಮದ ಮುಖ್ಯರಸ್ತೆಯಲ್ಲಿ ಮಹಿಳೆಯ ಕುತ್ತಿಗೆಯಲ್ಲಿದ್ದ ಮಾಂಗಲ್ಯ ಸರವನ್ನು ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ.

ಕೆ.ಮಾದಳ್ಳಿ ಗ್ರಾಮದ ಜ್ಯೋತಿ ಎಂಬವರೇ ಸರ ಕಳೆದುಕೊಂಡವರು. ಇವರು ತಮ್ಮ ಅತ್ತೆಯೊಂದಿಗೆ ಜಮೀನಿಗೆಂದು ನಡೆದುಕೊಂಡು ಹೋಗುತ್ತಿದ್ದಾಗ ಪಲ್ಸರ್ ಬೈಕಿನಲ್ಲಿ ಹಿಂದಿನಿoದ ಬಂದ ಇಬ್ಬರು ಖದೀಮರು, ಜ್ಯೋತಿ ಅವರ ಕತ್ತಿನಲ್ಲಿದ್ದ 2 ಲಕ್ಷ ರೂ. ಮೌಲ್ಯದ ಬೆಲೆ ಬಾಳುವ 60ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಈ ಕುರಿತು ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!