ಹೊಸದಿಗಂತ ಡಿಜಿಟಲ್ ಡೆಸ್ಕ್:
ಹುಕ್ಕೇರಿ ತಾಲೂಕಿನ ನರಸಿಂಗಪುರ ಗ್ರಾಮದ ಆರಕ್ಕೂ ಹೆಚ್ಚು ಮನೆಗಳಲ್ಲಿ ರಾತ್ರಿ ವೇಳೆ ಕಳ್ಳರು ಲಕ್ಷಾಂತರ ರೂಪಾಯಿ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ನರಸಿಂಗಪೂರ ಗ್ರಾಮವು ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿದೆ. ಈ ಗ್ರಾಮದಲ್ಲಿನ ಅಂಬೇಡ್ಕರ್ ಗಲ್ಲಿ ಹಾಗೂ ಪಕ್ಕದ ಗಲ್ಲಿಯಲ್ಲೂ ಮಧ್ಯರಾತ್ರಿ ಕಳ್ಳರು ನುಗ್ಗಿ ತಮ್ಮ ಕೈಚಳಕವನ್ನು ತೋರಿಸಿದ್ದಾರೆ.
ಯಾರು ಇಲ್ಲದೇ ಇರುವ ಮನೆಗಳೇ ಈ ಖದೀಮರ ಕಳ್ಳತನದ ಸ್ಪಾಟ್. 6ಕ್ಕೂ ಹೆಚ್ಚು ಮನೆಗಳಿಗೆ ರಾತ್ರೋರಾತ್ರಿ ನುಗ್ಗಿ, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳು, ಹಣವನ್ನು ಕಳ್ಳತನ ಮಾಡಿ ಅಲ್ಲಿಂದ ಕಾಲ್ಕಿತ್ತಿದ್ದಾರೆ.
ಈ ಘಟನೆಯಿಂದ ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ. ಸ್ಥಳಕ್ಕೆ ಯಮಕನಮರಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.