ಹೊಸದಿಗಂತ ಡಿಜಿಟಲ್ ಡೆಸ್ಕ್:
ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಅವರನ್ನುಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ವೈದ್ಯರು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.
ಬೆಂಗಳೂರಿನ ಜಯನಗರದಲ್ಲಿರುವಂತ ಅಪೋಲೋ ಆಸ್ಪತ್ರೆಗೆ ಸಾಲುಮರದ ತಿಮ್ಮಕ್ಕ ಅವರನ್ನು ತೀವ್ರ ಅನಾರೋಗ್ಯದ ಕಾರಣ ದಾಖಲಿಸಲಾಗಿದೆ. ಕಳೆದ 17 ದಿನಗಳಿಂದ ಆಸ್ಪತ್ರೆಯಲ್ಲಿ ಸಾಲುಮರದ ತಿಮ್ಮಕ್ಕ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಾರೆ .
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವಂತ ತಿಮ್ಮಕ್ಕ ಅವರಿಗೆ ವೈದ್ಯರು ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಿದ್ದಾರೆ.