ಹೊಸದಿಗಂತ ಡಿಜಿಟಲ್ ಡೆಸ್ಕ್:
ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ (Saalumarada Thimmakka) ಇಂದು ಸಂಜೆ ಮಂಜುನಾಥನಗರದಲ್ಲಿರುವ ನಿವಾಸದಲ್ಲಿ ಕಾಲು ಜಾರಿ ಬಿದ್ದಿದ್ದು, ಬೆನ್ನು ಮೂಳೆಗೆ ಪೆಟ್ಟಾಗಿದೆ. ಈ ಹಿನ್ನಲೆಯಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತಂತೆ ಕುಟುಂಬದ ಮೂಲದಿಂದ ಮಾಹಿತಿ ನೀಡಲಾಗಿದ್ದು, ಇಂದು ಸಂಜೆ ನಿವಾಸದಲ್ಲಿ ತಿಮ್ಮಕ್ಕ ಅವರು ಕಾಲು ಜಾರಿ ಬಿದ್ದಿದ್ದಾರೆ.ಈ ಪರಿಣಾಮ ಅವರ ಬೆನ್ನಿನ ಮೂಳೆಗೆ ಪೆಟ್ಟಾಗಿದೆ ಎಂದು ತಿಳಿಸಿದ್ದಾರೆ.
ಜಯನಗರದ ಅಪೊಲೋ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ವೈದ್ಯರು ಪರೀಕ್ಷೆ ನಡೆಸಿ, ಚಿಕಿತ್ಸೆಯಲ್ಲಿ ತೊಡಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.