ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಶಿರಾಡಿಘಾಟ್‌ನಲ್ಲಿ ಪರ್ಯಾಯ ಮಾರ್ಗ ಚಿಂತನೆ ಮಾಡಿದ್ದು, ಈ ಬಗ್ಗೆ ಕೇಂದ್ರ ಸಾರಿಗೆ ಸಚಿವರ ಜೊತೆ ಮಾತನಾಡಲು ಸೋಮವಾರ ದೆಹಲಿಗೆ ಹೋಗುತ್ತಿದ್ದೇನೆ. ಈ ಯೋಜನೆಗೆ ಕೇಂದ್ರ ಸರ್ಕಾರವು ಒಪ್ಪಿಗೆ ಸೂಚಿಸಿದರೆ ದೇಶದಲ್ಲೇ ಹೊಸ ಮೈಲಿಗಲ್ಲು ನಿರ್ಮಾಣವಾಗಲಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಸಕಲೇಶಪುರ ತಾಲ್ಲೂಕಿನ ವಿವಿದೆಡೆ ರಾಷ್ಟ್ರೀಯ ಹೆದ್ದಾರಿ 75 ರ ಕಾಮಗಾರಿ ವೀಕ್ಷಣೆ ಮಾಡಿ ಮಾತನಾಡಿದ ಅವರು, ಶಿರಾಡಿಘಾಟ್‌ನಲ್ಲಿ ಪರ್ಯಾಯ ಮಾರ್ಗ ವ್ಯವಸ್ಥೆಗೆ ಎನ್ಹೆಚ್ಎಐ ಅಧಿಕಾರಿಗಳು ನೀಲನಕ್ಷೆ ತೋರಿಸಿದ್ದಾರೆ. ಇದು 30 ಕಿ.ಮಿ ರಸ್ತೆಯಾಗಿದ್ದು, ಮೂರು ಕಡೆ ಟನಲ್ ನಿರ್ಮಾಣವಾಗುತ್ತದೆ. ಈ ಬಗ್ಗೆ ಕೇಂದ್ರ ಸಾರಿಗೆ ಸಚಿವರ ಗಮನಕ್ಕೆ ತರುತ್ತೇವೆ. ಸೋಮವಾರ ನಾನು ದೆಹಲಿಗೆ ಹೋಗಿ ಕೇಂದ್ರ ಸಚಿವರನ್ನ ಭೇಟಿ ಮಾಡಿ ವಿಷಯ ಪ್ರಸ್ತಾಪ ಮಾಡುತ್ತೇನೆ. ಕೇಂದ್ರ ಸಚಿವರು ಒಪ್ಪಿಗೆ ಕೊಟ್ಟರೆ ದೇಶದಲ್ಲಿ ಹೊಸ ಮೈಲಿಗಲ್ಲು ನಿರ್ಮಾಣವಾಗಲಿದೆ ಎಂದರು. !
ಪರ್ಯಾಯ ಮಾರ್ಗ ಮತ್ತು ಸುರಂಗ ಮಾರ್ಗದ ಬಗ್ಗೆ ಕೇಂದ್ರ ತೀರ್ಮಾನ ಮಾಡಬೇಕು. ಈ ಯೋಜನೆಗೆ ಸಂಪೂರ್ಣ ದುಡ್ಡು ಕೊಡುವುದು ರಾಷ್ಟ್ರೀಯ ರಸ್ತೆ ಪ್ರಾಧಿಕಾರ. ನಾವು ಪರಿಸರಕ್ಕೆ ಯಾವುದೇ ತೊಂದರೆ ಮಾಡದೆ ಕಾಮಗಾರಿ ಕೈಗೆತ್ತಿಕೊಳ್ಳುತ್ತೇವೆ ಎಂದು ಹೇಳಿದರು.