ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಹುಡುಕಾಟದಲ್ಲಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾನಾಗಲಿ, ನನ್ನ ಪುತ್ರಿ ಪ್ರಿಯಾಂಕಾ ಜಾರಕಿಹೊಳಿಯಾಗಲಿ ಸ್ಪರ್ಧಿಸುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾವು ಸಾಮಾನ್ಯ ಕಾರ್ಯಕರ್ತರ ಪರವಾಗಿ ನಿಲ್ಲುತ್ತೇವೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನನ್ನನ್ನು ಕಣಕ್ಕಿಳಿಸಲು ಉನ್ನತ ಮಟ್ಟದಲ್ಲಿ ಚರ್ಚೆ ನಡೆದಿದ್ದು ನಿಜ. ಆದರೆ ನನಗೆ ಆಸಕ್ತಿ ಇಲ್ಲ. ಬೆಳಗಾವಿ ಮತ್ತು ಚಿಕ್ಕೋಡಿ ಎರಡೂ ಕ್ಷೇತ್ರಗಳಿಗೆ ಸಾಕಷ್ಟು ಅಭ್ಯರ್ಥಿಗಳಿದ್ದು, ಪಕ್ಷದ ಸ್ಥಳೀಯ ಘಟಕದಿಂದ ಇಬ್ಬರು ಜನಪ್ರಿಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಸಚಿವ ಸತೀಶ್ ಹರಕಿಹೊಳಿ ಹೇಳಿದರು.