spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, September 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೂಡಿಗೆಯಲ್ಲಿ ಕ್ರೀಡಾ ವಸತಿ ನಿಲಯ ತೆರೆಯುವ ಚಿಂತನೆ: ಅಪ್ಪಚ್ಚುರಂಜನ್

- Advertisement -Nitte

ಹೊಸ ದಿಗಂತ ವರದಿ, ಕುಶಾಲನಗರ:

ಕೂಡಿಗೆಯಲ್ಲಿರುವ ಸರಕಾರಿ ಕ್ರೀಡಾ ಪ್ರೌಢಶಾಲೆಯ ಅವರಣದಲ್ಲಿ ಮುಂದಿನ ಸಾಲಿನಲ್ಲಿ ಪದವಿ ಪೂರ್ವ ಮತ್ತು ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕ್ರೀಡಾ ವಸತಿ ನಿಲಯ ತೆರೆಯಲು ಚಿಂತನೆ ನಡೆಸಲಾಗುತ್ತಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ ಪಿ ಅಪ್ಪಚ್ಚು ರಂಜನ್ ತಿಳಿಸಿದ್ದಾರೆ.

ಕೂಡಿಗೆ ಕ್ರೀಡಾ ಶಾಲೆಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಪೋಷಕರು ಕೂಡಿಗೆಯಲ್ಲಿ ಕ್ರೀಡಾ ವಸತಿ ನಿಲಯ ತೆರೆಯುವಂತೆ ಸಲ್ಲಿಸಿದ ಮನವಿ ಸ್ವೀಕರಿಸಿ ಅವರು ಮಾತಾಡಿದರು.

ಕೂಡಿಗೆಯ ಕ್ರೀಡಾಶಾಲೆ ಆವರಣದಲ್ಲಿ ಉತ್ತಮವಾದ ಜಾಗವಿರುವುದರಿಂದ ಮತ್ತು ಈ ಕ್ರೀಡಾ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಮತ್ತು ಪದವಿ ತರಗತಿಯ ಅಭ್ಯಾಸಕ್ಕೆ ಅನುಕೂಲ ಕಲ್ಪಿಸುವ ಮತ್ತು ಜಿಲ್ಲೆಯ ಕ್ರೀಡಾ ಪಟುಗಳಿಗೆ ಹೆಚ್ಚಿನ ಉತ್ತೇಜನ ನೀಡುವ ನಿಟ್ಟಿನಲ್ಲಿ
ಈ ಕುರಿತು ಮುಂದಿನ ದಿನಗಳಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವರೊಂದಿಗೆ ಚರ್ಚಿಸಿ ನಂತರ ಕ್ರೀಡಾ ಅಯುಕ್ತರ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

ಈ ಸಂದರ್ಭ ಕೂಡುಮಂಗಳೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಇಂದಿರಾ ರಮೇಶ್, ಉಪಾಧ್ಯಕ್ಷ ಭಾಸ್ಕರ್ ನಾಯಕ್, ಗ್ರಾಮ ಪಂಚಾಯತ್ ಸದಸ್ಯ, ಸಹಕಾರ ಸಂಘ ನಿರ್ದೇಶಕ ಕೆ.ಕೆ.ಭೋಗಪ್ಪ, ಆರ್ ಎಂಸಿ ಮಾಜಿ ಅಧ್ಯಕ್ಷ ಎಂ. ಬಿ.ಜಯಂತ್, ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಕೆ.ಕೆ. ನಾ

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss