ಹೊಸದಿಗಂತ ಡಿಜಿಟಲ್ ಡೆಸ್ಕ್:
3ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಕುಸಿದುಬಿದ್ದು ಮೃತಪಟ್ಟ ಘಟನೆ ಚಾಮರಾಜನಗರದ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಬದನಗುಪ್ಪೆಯ ಗ್ರಾಮದ ಲಿಂಗರಾಜು, ಶೃತಿ ದಂಪತಿಯ ಪುತ್ರಿ ತೇಜಸ್ವಿನಿ (8) ಎಂದು ಗುರುತಿಸಲಾಗಿದೆ.
ಬಾಲಕಿ ಬೆಳಗ್ಗೆ ಶಾಲೆಗೆ ಹೋಗಿದ್ದಳು. ತರಗತಿಯಲ್ಲಿ ಶಿಕ್ಷಕರಿಗೆ ನೋಟ್ಸ್ ತೋರಿಸಲು ಹೋಗುತ್ತಿದ್ದಂತೆ ವಿದ್ಯಾರ್ಥಿನಿ ಹೃದಯ ಸ್ತಂಭನದಿಂದ ಕುಸಿದು ಬಿದ್ದಿದ್ದಾಳೆ. ಕುಸಿದು ಬಿದ್ದ ವಿದ್ಯಾರ್ಥಿನಿಯನ್ನು ಶಿಕ್ಷಕರು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆಗೆ ಅಷ್ಟರಲ್ಲಿ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ.