ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎನ್ನಲಾಗಿದೆ. 12 ವರ್ಷದಿಂದ ಒಟ್ಟಿಗಿರುವ ಶೋಯಬ್ ಹಾಗೂ ಸಾನಿಯಾ ಮಿರ್ಜಾ ಇದೀಗ ಬೇರೆ ಆಗುತ್ತಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡಿದೆ. ಶೋಯಬ್ ಪಾಕಿಸ್ತಾನ ಮೂಲದವರಾಗಿದ್ದರಿಂದ ಇವರ ಮದುವೆ ವೇಳೆ ಕೆಲ ವಲಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು.
ಸಾನಿಯಾ ಮಿರ್ಜಾ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ‘ಒಡೆದ ಹೃದಯಗಳು ಎಲ್ಲಿಗೆ ಹೋಗುತ್ತವೆ? ಅಲ್ಲಾನನ್ನು ಹುಡುಕಲು’ ಎನ್ನುವ ಪೋಸ್ಟ್ ಒಂದನ್ನು ಮಾಡಿದ್ದರು. ಅಲ್ಲಿಂದ ಇವರಿಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎನ್ನುವ ಮಾತು ಆರಂಭವಾಗಿತ್ತು.
ಪಾಕಿಸ್ತಾನಿ ನಟಿಯ ಜೊತೆ ಶೋಯಬ್ ಅಫೇರ್‌ನಿಂದ ದಾಂಪತ್ಯದಲ್ಲಿ ಬಿರುಕು ಉಂಟಾಗಿದೆ ಎನ್ನಲಾಗಿದೆ. ಪಾಕ್ ನಟಿ ಆಯೇಶಾ ಒಮರ್ ಜೊತೆ ಹಾಟ್ ಫೋಟೊಶೂಟ್ ಒಂದನ್ನು ಮಾಡಿಸಿದ್ದರು. ಸ್ವಿಮ್ಮಿಂಗ್ ಪೂಲ್‌ನಲ್ಲಿ ಮಾಡಿಸಿದ ಫೋಟೊಶೂಟ್ ಭಾರೀ ವೈರಲ್ ಆಗಿತ್ತು. ಆದರೆ ಆಯೇಶಾ ಈ ರೂಮರ‍್ಸ್‌ನ್ನು ಒಪ್ಪಿರಲಿಲ್ಲ. ಈ ಬಗ್ಗೆ ಇಬ್ಬರು ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ. ಇದೆಲ್ಲಾ ಸುಳ್ಳಾಗಿರಲಿ ಎಂದು ಫ್ಯಾನ್ಸ್ ಹೇಳುತ್ತಿದ್ದಾರೆ.