ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಭಾರತದಲ್ಲಿ ಕೊರೋನಾ ಎರಡನೇ ಅಲೆ ಜನರ ಜೀವಕ್ಕೇ ಕುತ್ತು ತಂದಿದ್ದು, ಸೆಪ್ಟೆಂಬರ್-ಅಕ್ಟೋಬರ್ ವೇಳೆಗೆ ಕೊರೋನಾ ಮೂರನೇ ಅಲೆ ಕಾಣಿಸಿಕೊಳ್ಳಲಿದೆ ಎಂದು ದೆಹಲಿ ಏಮ್ಸ್ ನಿರ್ದೇಶಕ ರಣ್ದೀಪ್ ಗುಲೇರಿಯಾ ತಿಳಿಸಿದ್ದಾರೆ.
ಸಂಭಾವ್ಯ ಮೂರನೇ ಅಲೆಯ ಪ್ರಭಾವ ಎರಡನೇ ಅಲೆಯಷ್ಟು ತೀವ್ರವಾಗಿಲ್ಲ ಎಂದಿದ್ದಾರೆ.
ಈಗಾಗಲೇ ಲಸಿಕಾ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಮೂರನೇ ಅಲೆ ವೇಳೆಗೆ ಹೆಚ್ಚು ಮಂದಿ ಲಸಿಕೆ ಪಡೆದಿದ್ದು, ಮೂರನೆ ಅಲೆ ಅಷ್ಟು ತೀವ್ರವಾಗಿ ಇರುವುದಿಲ್ಲ ಎಂದು ಹೇಳಿದ್ದಾರೆ, ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ತಗ್ಗಿದ್ದು, ಜನ ಓಡಾಟ ನಡೆಸುತ್ತಿದ್ದಾರೆ. ಆದರೆ ಇನ್ನೂ ಜಾಗರೂಕರಾಗಿರುವುದು ಒಳ್ಳೆಯದು ಎಂದಿದ್ದಾರೆ. ಮಕ್ಕಳಿಗೆ ಗಂಭೀರ ಮಟ್ಟದಲ್ಲಿ ಸೋಂಕು ತಗುಲುವ ಸಾಧ್ಯತೆ ಇಲ್ಲ ಎಂದಿದ್ದಾರೆ.