Friday, August 19, 2022

Latest Posts

ಆಗಸ್ಟ್ ಅಂತ್ಯಕ್ಕೆ ಮೂರನೆ ಅಲೆ: ಎರಡನೇ ಅಲೆಯಷ್ಟು ತೀವ್ರತೆ ಇಲ್ಲ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಭಾರತದಲ್ಲಿ ಕೊರೋನಾ ಎರಡನೇ ಅಲೆ ಸಂಪೂರ್ಣ ನಿಯಂತ್ರಣಕ್ಕೆ ಬರುವ ಮುನ್ನವೇ ಆಗಸ್ಟ್ ಅಂತ್ಯದಲ್ಲಿ ಕೊರೋನಾ ಮೂರನೇ ಅಲೆ ವಕ್ಕರಿಸಲಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಸಾಂಕ್ರಾಮಿಕ ರೋಗಶಾಸ್ತ್ರದ ಮುಖ್ಯಸ್ಥ ಸಮಿರನ್ ಪಾಂಡಾ ಮಾಹಿತಿ ನೀಡಿದ್ದಾರೆ.
ಮೂರನೇ ಅಲೆ ಆಗಸ್ಟ್ ಅಂತ್ಯಕ್ಕೆ ಅಪ್ಪಳಿಸಲಿದೆ. ಎರಡನೇ ಅಲೆಗಿಂತ ಕಡಿಮೆ ತೀವ್ರತೆ ಹೊಂದಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಮೂರನೇ ಅಲೆ ಬರದೇ ಇರಲು ಸಾಧ್ಯವಿಲ್ಲ. ಆದರೆ ಎರಡನೇ ಅಲೆ,ಮೊದಲನೆ ಅಲೆಯಷ್ಟು ತೀವ್ರತೆ ಇರುವುದಿಲ್ಲ. ಮೊದಲ,ಎರಡನೇ ಅಲೆಯಲ್ಲಿ ಪಡೆದ ರೋಗನಿರೋಧಕತೆ ಕೆಳಗಿಳಿದರೆ ಮೂರನೇ ಅಲೆಯಿಂದ ಹಾನಿಯಾಗಬಹುದು ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!