Thursday, August 18, 2022

Latest Posts

ಬಾಯಾರು ಕುಟುಂಬ ಆರೋಗ್ಯ ಕೇಂದ್ರದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

ಹೊಸ ದಿಗಂತ ವರದಿ, ಕಾಸರಗೋಡು:

ಪೈವಳಿಕೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಯಾರು ಕುಟುಂಬ ಆರೋಗ್ಯ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ನಡೆಯಿತು. ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ ಶಿಲಾನ್ಯಾಸ ನೆರವೇರಿಸಿದರು. ಪೈವಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಕೆ. ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರ್ ಚಂದ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪುಷ್ಪಲಕ್ಷ್ಮಿ , ಗ್ರಾ.ಪಂ. ಅಭಿವೃದ್ದಿ ಸ್ಥಾಯೀ ಸಮಿತಿಯ ಅಧ್ಯಕ್ಷ ಅಬ್ದುಲ್ ರಝಾಕ್ ಚಿಪ್ಪಾರ್, ಆರೋಗ್ಯ ಮತ್ತು ವಿದ್ಯಾಭ್ಯಾಸ ಸ್ಥಾಯೀ ಸಮಿತಿಯ ಅಧ್ಯಕ್ಷ ಜುಲ್ಪಿಕರ್ ಅಲಿ, ಕ್ಷೇಮ ಸ್ಥಾಯೀ ಸಮಿತಿಯ ಅಧ್ಯಕ್ಷೆ ಖೈರುನೀಸಾ ಹಾಗೂ ಗ್ರಾ.ಪಂ. ಸದಸ್ಯರು, ಎಚ್.ಎಂ.ಸಿ. ಸದಸ್ಯರು, ರಾಜಕೀಯ ನೇತಾರರು, ಸಾಮಾಜಿಕ ಕಾರ್ಯಕರ್ತರು ಉಪಸ್ಥಿತರಿದ್ದರು.
ಬಾಯಾರು ಆರೋಗ್ಯ ಕೇಂದ್ರದ ವೈದ್ಯಕೀಯ ಅಧಿಕಾರಿ ಡಾ.ಮುರಳೀಧರ ಕೆ.ಶೆಟ್ಟಿ ಸ್ವಾಗತಿಸಿ, ಆರೋಗ್ಯ ಪರಿವೀಕ್ಷಕ ಸುರೇಶ್ ವಂದಿಸಿದರು. ಲೋಕೋಪಯೋಗಿ ಇಲಾಖೆಯ ಅಧಿಕಾರಿ ಮೊಹಮ್ಮದ್ ಮುನೀರ್ ವರದಿ ಮಂಡಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!