Tuesday, March 28, 2023

Latest Posts

ಚಿಲಿ ಅರಣ್ಯದಲ್ಲಿ ಕಾಡ್ಗಿಚ್ಚು: ಬೆಂಕಿ ನಿಯಂತ್ರಣ ಪ್ರಕ್ರಿಯೆಯಲ್ಲಿ 13 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಚಿಲಿಯಲ್ಲಿ ಕಾಡ್ಗಿಚ್ಚು ಉರಿಯುತ್ತಿದೆ. ಭಾರೀ ಬೆಂಕಿಗೆ ಆಹುತಿಯಾಗಿ ಸ್ಥಳೀಯರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಬೇಸಿಗೆಯ ಬಿರುಗಾಳಿಯಿಂದಾಗಿ ದಕ್ಷಿಣ-ಮಧ್ಯ ಚಿಲಿಯ ಕಾಡುಗಳಲ್ಲಿ ಬೆಂಕಿ ಉರಿಯುತ್ತಿದೆ. ಚಿಲಿಯ ರಾಜಧಾನಿ ಸ್ಯಾಂಟಿಯಾಗೊದಿಂದ ದಕ್ಷಿಣಕ್ಕೆ ಸುಮಾರು 500 ಕಿಮೀ ದೂರದಲ್ಲಿರುವ ಬಯೋಬಿಯೊದಲ್ಲಿನ ಸಾಂತಾ ಜುವಾನಾ ಪಟ್ಟಣದ ಸುತ್ತಲೂ ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ 11 ಜನರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಅಂತೆಯೇ, ಲಾ ಅರೌಕಾನಿಯಾದ ದಕ್ಷಿಣ ಪ್ರದೇಶದಲ್ಲಿ ಬೆಂಕಿ ನಂದಿಸುವ ಪ್ರಕ್ರಿಯೆಯಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ. ಅಪಘಾತದಲ್ಲಿ ಪೈಲಟ್ ಮತ್ತು ಮೆಕ್ಯಾನಿಕ್ ಸಾವನ್ನಪ್ಪಿದ್ದಾರೆ. ಅನೇಕ ಪ್ರದೇಶಗಳಲ್ಲಿ ಸಂಭವಿಸಿದ ಭಾರಿ ಬೆಂಕಿಯಿಂದಾಗಿ 13 ಜನರು ಸಾವನ್ನಪ್ಪಿದ್ದಾರೆ ಎಂದು ಚಿಲಿಯ ಸರ್ಕಾರ ತಿಳಿಸಿದೆ.

ದೇಶದ ಹಲವೆಡೆ ಬೆಂಕಿ ಕಾಣಿಸಿಕೊಂಡಿದ್ದು, ನೂರಾರು ಮನೆಗಳಿಗೆ ಹಾನಿಯಾಗಿದೆ ಎಂದು ಚಿಲಿಯ ಸರ್ಕಾರ ಘೋಷಿಸಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ಅಪಾಯಕಾರಿಯಾಗಲಿದೆ ಅಂತಿದಾರೆ ಅಧಿಕಾರಿಗಳು. ಬಯೋಬಿಯೋ ಮತ್ತು ನೆರೆಯ ನಬುಲ್, ಕೃಷಿ ಮತ್ತು ಅರಣ್ಯ ಪ್ರದೇಶಗಳ ಜನರಿಗೆ ಸರ್ಕಾರ ಎಚ್ಚರಿಕೆಯನ್ನು ನೀಡಿದ್ದು, ವಿಪತ್ತು ಸನ್ನಿಹಿತವಾಗಿದೆ ಎಂದು ಎಚ್ಚರಿಸಿದೆ. ಅಧಿಕಾರಿಗಳು ಮುಂಚಿತವಾಗಿ ಆ ಪ್ರದೇಶಗಳಲ್ಲಿ ಸೈನ್ಯ ಮತ್ತು ಹೆಚ್ಚುವರಿ ಸಂಪನ್ಮೂಲಗಳನ್ನು ನಿಯೋಜಿಸುವತ್ತ ಗಮನ ಹರಿಸಿದ್ದಾರೆ. ಇದೇ ವೇಳೆ, ದೇಶದ 151 ಪ್ರದೇಶಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 65 ಪ್ರದೇಶಗಳಲ್ಲಿ ಹತೋಟಿಗೆ ತರಲಾಗಿದೆ. 39 ಪ್ರದೇಶಗಳಲ್ಲಿ ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ನ್ಯೂಬಲ್ ಪ್ರದೇಶಗಳಿಗೆ ಭೇಟಿ ನೀಡಿ ತುರ್ತು ಸಂದರ್ಭದಲ್ಲಿ ಎಲ್ಲಾ ಸಂಪನ್ಮೂಲಗಳು ಲಭ್ಯವಾಗುವಂತೆ ನೋಡಿಕೊಳ್ಳುತ್ತಿದ್ದಾರೆ. ಕೆಲವರು ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿರಬಹುದು ಎಂದು ಬೋರಿಕ್ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಗಮನಹರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!