spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕಿಟಕಿಯೊಂದರಲ್ಲಿ ಬಿರುಕು: ಸೌದಿಗೆ ತೆರಳುತ್ತಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ತುರ್ತು ಭೂಸ್ಪರ್ಶ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಸೌದಿ ಅರೇಬಿಯಾಕ್ಕೆ ತೆರಳುತ್ತಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದ ಕಿಟಕಿಯೊಂದರಲ್ಲಿ ಬಿರುಕು ಪತ್ತೆಯಾಗಿದ್ದು, ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.

ಶನಿವಾರ ತಿರುವನಂತಪುರದಿಂದ ಬೆಳಿಗ್ಗೆ 7.52ಕ್ಕೆ ವಿಮಾನವು ಟೇಕ್‌ ಆಫ್‌ ಆಗಿತ್ತು. ಆದರೆ, ವಿಮಾನದ ಕಿಟಕಿಯೊಂದರಲ್ಲಿ ಬಿರುಕು ಪತ್ತೆಯಾದ ಹಿನ್ನೆಲೆ ಟೇಕ್‌ ಆಫ್‌ ವಿಮಾನ ನಿಲ್ದಾಣಕ್ಕೆ ಹಿಂತಿರುಗಿ ಒಂದು ಗಂಟೆಯೊಳಗೆ 8.50ಕ್ಕೆ ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ವಿಮಾನದಲ್ಲಿ ಸರಕುಗಳು ಮತ್ತು ಎಂಟು ಸಿಬ್ಬಂದಿ ಇದ್ದರು. ಎಲ್ಲರೂ ಸುರಕ್ಷಿತವಾಗಿದ್ದಾರೆ.

ಟೇಕ್ ಆಫ್ ಗೂ ಮುನ್ನ ವಿಮಾನದಲ್ಲಿ ಯಾವುದೇ ಬಿರುಕಿರಲಿಲ್ಲ.ಟೇಕ್‌ ಆಫ್‌ ವೇಳೆ ಈ ಬಿರುಕು ಉಂಟಾಗಿರಬಹುದು ಎಂದು ತಿರುವನಂತಪುರ ವಿಮಾನ ನಿಲ್ದಾಣದ ನಿರ್ದೇಶಕ ಸಿ.ವಿ. ರವೀಂದ್ರನ್‌ ಹೇಳಿದ್ದಾರೆ.

 

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss