ನಾಳೆ ಸೌತ್‌ ಆಫ್ರಿಕಾ ವಿರುದ್ಧದ ಮ್ಯಾಚ್ ಡೌಟ್:‌ ಕರೆಂಟ್‌ ಬಿಲ್‌ ಕಟ್ಟದ ಸ್ಟೇಡಿಯಂನ ವಿದ್ಯುತ್‌ ಪೂರೈಕೆ ಸ್ಥಗಿತ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಟಿ 20 ವಿಶ್ವಕಪ್‌ಗಾಗಿ ಆಸ್ಟ್ರೇಲಿಯಾಕ್ಕೆ ತೆರಳುವ ಮೊದಲು ಮೊದಲು ಮೆನ್ ಇನ್ ಬ್ಲೂ ಪಡೆ ಮೂರು ಪಂದ್ಯಗಳ T20 ಸರಣಿಗೆ ದಕ್ಷಿಣ ಆಫ್ರಿಕಾಕ್ಕೆ ಆತಿಥ್ಯ ವಹಿಸಲಿದೆ. ಈ ಸರಣಿಯ ಮೊದಲ ಪಂದ್ಯ  ತಿರುವನಂತಪುರಂನಲ್ಲಿ ಸೆ.28 ರಂದು ಆಯೋಜಿಸಲಾಗಿದೆ. ಈಗಾಗಲೇ ಎರಡೂ ತಂಡಗಳು ನಗರಕ್ಕೆ ತಲುಪಿದ್ದು ಅಭ್ಯಾಸದಲ್ಲಿ ನಿರತವಾಗಿವೆ.
ತಿರುವನಂತಪುರಂನ ಗ್ರೀನ್‌ಫೀಲ್ಡ್ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ಬಹಳ ವರ್ಷಗಳ ಬಳಿಕ ನಡೆಯುತ್ತಿರುವ ಪಂದ್ಯವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರರಾಗಿದ್ದಾರೆ. ಆದರೆ ಅದಕ್ಕೂ ಮುನ್ನ ಶಾಕಿಂಗ್‌ ನ್ಯೂಸ್‌ ಒಂದು ಹೊರಬಿದ್ದಿದೆ.  ವರದಿಗಳ ಪ್ರಕಾರ, ಗ್ರೀನ್‌ಫೀಲ್ಡ್ ಇಂಟರ್‌ನ್ಯಾಷನಲ್ ಸ್ಟೇಡಿಯಂ 2 ಕೋಟಿಗೂ ಹೆಚ್ಚು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದು, ಹೀಗಾಗಿ ಗ್ರೌಂಡ್‌ ನಲ್ಲಿ ವಿದ್ಯುತ್ ಪೂರೈಕೆಯನ್ನು ಸಂಬಂಧಪಟ್ಟ ಅಧಿಕಾರಿಗಳು ನಿಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅದಾಗ್ಯೂ, ಪಂದ್ಯ ಮುಗಿದ ಬಳಿಕ  ಆದ ಕಿ ಮೊತ್ತವನ್ನು ನೀಡುವುದಾಗಿ ಕೆಸಿಎ ರಾಜ್ಯದ ವಿದ್ಯುತ್‌ ಮಂಡಳಿಗೆ ಭರವಸೆ ನೀಡಿದ್ದು, ಇದಕ್ಕೆ ವಿದ್ಯುತ್‌ ಇಲಾಖೆ ಅಧಿಕಾರಿಗಳೂ ಒಪ್ಪಿದ್ದಾರೆ. ಪಂದ್ಯ ನಿಗದಿಯಂತೆ ಸುಸೂತ್ರವಾಗಿ ಸಾಗಲಿದೆ, ಪಂದ್ಯಕ್ಕೆ ಯಾವುದೇ ಅಡ್ಡಿಯಾಗುವುದಿಲ್ಲ ಎಂದು ಕ್ರೀಡಾಂಗಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದಕ್ಷಿಣ ಆಫ್ರಿಕಾ T20 ಸರಣಿಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್. ಶಮಿ, ಹರ್ಷಲ್ ಪಟೇಲ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ.
ದಕ್ಷಿಣ ಆಫ್ರಿಕಾ ತಂಡ:
ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾ, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಆನ್ರಿಚ್ ನಾರ್ಟ್ಜೆ, ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕಗಿಸೊ ರಬಾಡ, ರಿಸ್ಸೌ, ರಬಾಡ ಟ್ರಿಸ್ಟಾನ್ ಸ್ಟಬ್ಸ್.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!