ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ವಪಕ್ಷ ಸಭೆ ಕರೆದ ನಂತರ ಸರ್ಕಾರದ ವತಿಯಿಂದ ಪ್ರಧಾನ ಮಂತ್ರಿ ಹಾಜರಿರಬೇಕಿತ್ತು. ಆದರೆ, ಅವರ ಹಾಜರಾತಿ ಇರಲಿಲ್ಲ. ಮೋದಿಯವರ ಈ ವರ್ತನೆ ಸರಿಯಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುಡುಗಿದ್ದಾರೆ.
ಪೆಹಲ್ಗಾಮ್ ದಾಳಿ ವಿಚಾರವಾಗಿ ಸರ್ವ ಪಕ್ಷಗಳ ಸಭೆ ಕರೆದಿದ್ದರು. ಎಲ್ಲರೂ ಭಾಗಿಯಾಗಿದ್ದೆವು. ಲೋಕಸಭೆ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಕೂಡ ಇದ್ದರು. ಸರ್ಕಾರದ ವತಿಯಿಂದ ಪ್ರಧಾನ ಮಂತ್ರಿ ಹಾಜರಿರಬೇಕಿತ್ತು. ಆದರೆ, ಮೋದಿ ಹಾಜರಾತಿ ಇರಲಿಲ್ಲ. ಪ್ರಧಾನ ಮಂತ್ರಿಗಳ ಈ ಆಟಿಟ್ಯೂಡ್ ಸರಿ ಇಲ್ಲ ಎಂದು ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.