ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರತಿಪಕ್ಷಗಳ ತೀವ್ರ ಗದ್ದಲ ಹಾಗೂ ವಿರೋಧದ ನಡುವೆಯೂ ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಬುಧವಾರ ವಕ್ಫ್ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದ್ದಾರೆ.
ಈ ವೇಳೆ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಅವರು ತ್ರೀವ ವಿರೋಧ ವ್ಯಕ್ತಪಡಿಸಿ, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಈ ಸರ್ಕಾರವು ಅಲ್ಪಸಂಖ್ಯಾತರನ್ನು ಅವಮಾನಿಸುತ್ತಿದೆ ಮತ್ತು ಅವರ ಹಕ್ಕುಗಳನ್ನು ಕಸಿದುಕೊಳ್ಳಲು ಯತ್ನಿಸುತ್ತಿದೆ. ಈ ಮಸೂದೆಯು ಸಂವಿಧಾನವನ್ನು ದುರ್ಬಲಗೊಳಿಸುವ, ಅಲ್ಪಸಂಖ್ಯಾತ ಸಮುದಾಯವನ್ನು ಅವಮಾನಿಸುವ, ಭಾರತೀಯ ಸಮಾಜವನ್ನು ವಿಭಜಿಸುವ ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ಕಸಿದುಕೊಳ್ಳುವ ಗುರಿ ಹೊಂದಿದೆ. ಇದು ಸಂವಿಧಾನದ ಮೇಲೆ 4D ದಾಳಿ ಎಂದು ವಾಗ್ದಾಳಿ ನಡೆಸಿದರು.
ಇಂದುಒಂದು ನಿರ್ದಿಷ್ಟ ಸಮುದಾಯದ ಭೂಮಿಯ ಮೇಲೆ ಕಣ್ಣಿಟ್ಟಿದ್ದಾರೆ. ನಾಳೆ ಸಮಾಜದ ಇತರ ಅಲ್ಪಸಂಖ್ಯಾತರ ಭೂಮಿಯನ್ನು ಗುರಿಯಾಗಿಸಿಕೊಳ್ಳುತ್ತಾರೆ ಎಂದು ಟೀಕಿಸಿದರು.
ವಿರೋಧ ಪಕ್ಷಗಳು ಸೂಚಿಸಿದ ಒಂದೇ ಒಂದು ತಿದ್ದುಪಡಿಯನ್ನು ಅಂಗೀಕರಿಸಿಲ್ಲ. ಅಭಿಪ್ರಾಯ ಸಂಗ್ರಹಿಸುವಾಗ ವಕ್ಫ್ ಬಗ್ಗೆ ಮಾಹಿತಿ ಇಲ್ಲದವರನ್ನು ಜೆಪಿಸಿಗೆ ಆಹ್ವಾನಿಸಲಾಗಿದೆ ಎಂದರು.