ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಒಂಬತ್ತನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ವೇಳೆ ಕೇಂದ್ರ ಸರ್ಕಾರ ತನ್ನ ಕರ್ತವ್ಯ ನಿರ್ವಣೆಗೆ ಹಿಂದೇಟು ಹಾಕುವುದಿಲ್ಲ. ಈ ಬಜೆಟ್ ಪ್ರತಿಯೊಬ್ಬರನ್ನೂ ತಲುಪಲಿದೆ ಎಂದು ಸಚಿವರು ಆಶ್ವಾಸನೆ ನೀಡಿದ್ದಾರೆ.
ದೇಶದ ಬೆಳವಣಿಗೆಯ ಲಾಭಾಂಶ ಪ್ರತಿಯೊಬ್ಬ ರೈತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಯುವಕರಿಗೆ ತಲುಪುವಂತೆ ನಾವು ನೋಡಿಕೊಳ್ಳುತ್ತಿದ್ದೇವೆ. ಬಡವರು, ಸೌಲಭ್ಯ ವಂಚಿತರು ಮತ್ತು ಹಿಂದುಳಿದವರ ಅಭಿವೃದ್ಧಿಗೆ ಸರ್ಕಾರ ಸಂಕಲ್ಪ ಮಾಡಿದೆ.
ನಮ್ಮ ಕರ್ತವ್ಯ ಎಂದರೆ ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸುವುದು, ಅದನ್ನು ಉಳಿಸಿಕೊಳ್ಳುವುದು. ಜನರ ಆಕಾಂಕ್ಷೆಗಳನ್ನು ಈಡೇರಿಸುವುದಾಗಿದೆ. ನಮ್ಮ ಕರ್ತವ್ಯವು ಪ್ರತಿಯೊಂದು ಕುಟುಂಬ, ಸಮುದಾಯ ಮತ್ತು ವಲಯವು ಸಂಪನ್ಮೂಲಗಳು, ಸೌಕರ್ಯಗಳು ಮತ್ತು ಅವಕಾಶಗಳನ್ನು ಪಡೆದುಕೊಳ್ಳುವಂತೆ ಮಾಡುವುದಾಗಿದೆ ಎಂದಿದ್ದಾರೆ.



