ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೌಹಾರ್ದತೆಗೆ ಒತ್ತು ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಬೇಕು. ಜನರನ್ನು ಪ್ರೀತಿಯಿಂದ ಬರುವಂತೆ ಮಾಡಬೇಕು. ಭಯ ಪಡಿಸುವಂತಾಗಬಾರದು ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಹೇಳಿದರು.
ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಘಂಟಿಹೊಳೆ ಅವರು ಕರಾವಳಿ ಪ್ರವಾಸೋದ್ಯಮವನ್ನು ವಿಶೇಷ ಪ್ಯಾಕೇಜ್ ಎಂದು ಪರಿಗಣಿಸುವ ವಿಷಯವನ್ನು ಪ್ರಸ್ತಾಪಿಸಿದರು.
ಇದಕ್ಕೆ ಉತ್ತರಿಸಿದ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರು, ರಾಜ್ಯದಲ್ಲಿ ಕರಾವಳಿ ಪ್ರವಾಸೋದ್ಯಮವನ್ನು ಸುಧಾರಿಸುವ ಪ್ರಸ್ತಾಪವನ್ನು ವಿವರಿಸಿದರು.
ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ತರುವ ಪ್ರಸ್ತಾವನೆ ಇಲ್ಲ. ಪ್ರವಾಸೋದ್ಯಮ ನೀತಿಯಲ್ಲೇ ಕರಾವಳಿ ಭಾಗದಲ್ಲಿನ ಎಲ್ಲಾ ವರ್ಗದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಅವಕಾಶಗಳನ್ನು ಕಲ್ಪಿಸಲಾಗಿದೆ. ಕರಾವಳಿ ಹಾಗೂ ಕಡಲತೀರ ಪ್ರದೇಶಕ್ಕೆ ವಿಶೇಷ ಮಹತ್ವ ನೀಡಲಾಗಿದೆ ಎಂದು ಹೇಳಿದರು.