ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನ ಪರಿಷತ್ ಸದಸ್ಯರನ್ನು ಭಯೋತ್ಪಾದಕರಂತೆ ನಡೆಸಿಕೊಳ್ಳುತ್ತಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.
ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ವಿಜಯೇಂದ್ರ ಬೆಳಗಾವಿಗೆ ಭೇಟಿ ನೀಡಿದ್ದರು. ಸಿ.ಟಿ.ರವಿ ಗಾಯಗೊಂಡಿದ್ದರೂ ಆಸ್ಪತ್ರೆಗೆ ಕರೆದೊಯ್ಯಲಿಲ್ಲ ಎಂದು ಮಾಧ್ಯಮಗಳಿಗೆ ತಿಳಿಸಿದರು. ರಾತ್ರಿಯೆಲ್ಲಾ 400-500 ಕಿ.ಮೀ ಸುತ್ತಾಡಿಸಿದ್ದಾರೆ. ಎಲ್ಲೂ ಕೂಡ ಕೂರುವುದಕ್ಕೆ ಅವಕಾಶ ಕೊಟ್ಟಿಲ್ಲ. ಬೆಂಗಳೂರಿಗೆ ಹಾಜರು ಪಡಿಸುತ್ತೇವೆ ಎಂದು ಗದಗ, ರಾಮದುರ್ಗ ಸೇರಿ ಎಲ್ಲಾ ಪೊಲೀಸ್ ಸ್ಟೇಷನ್ ಸುತ್ತಾಡಿಸಿ ಈಗ ವಾಪಸ್ ಬೆಳಗಾವಿಗೆ ಕರೆತರುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸರ್ಕಾರದ ನಡವಳಿಕೆ, ಸುವರ್ಣಸೌಧದೊಳಕ್ಕೆ ನುಗ್ಗಿ ಕೆಲವು ಪುಡಾರಿಗಳು, ರೌಡಿಗಳು ದಾಂಧಲೆ ನಡೆಸಲು ಹೊರಟಿದ್ದರು. ನಡುರಸ್ತೆಯಲ್ಲಿ ಹಲ್ಲೆ ಮಾಡಲು ಹೋಗಿದ್ದರು. ಪೊಲೀಸರದ್ದು ಅತಿರೇಕದ ವರ್ತನೆ. ಸರ್ಕಾರದ ಕುಮ್ಮಕ್ಕಿನಿಂದ ನಡೆದಿದೆ ಎಂದು ಕಿಡಿಕಾರಿದ್ದಾರೆ.