ಮೇಲ್ಮನೆ ಅಭ್ಯರ್ಥಿಗಳಿಗೆ ಅಭಿನಂದಿಸುತ್ತ ಬಿಜೆಪಿ ರಾಜ್ಯಾಧ್ಯಕ್ಷರು ಮಾಡಿದ ವ್ಯಾಖ್ಯಾನವಿದು

ಹೊಸ ದಿಗಂತ ಡಿಜಿಟಲ್ ಡೆಸ್ಕ್
ಕುಟುಂಬಕ್ಕೆ ಬಂದ ಸೊಸೆಯನ್ನು ಪ್ರತ್ಯೇಕವಾಗಿ ನೋಡುವುದಿಲ್ಲ. ಅಂತೆಯೇ ಆಯ್ಕೆ ನಡೆದಿದೆ. ರಾಜ್ಯದಿಂದ 20 ಹೆಸರುಗಳನ್ನು ಕಳುಹಿಸಲಾಗಿತ್ತು. 4 ಸೀಟಿಗೆ ನಾಲ್ಕೇ ಜನರಿಗೆ ಅವಕಾಶ ಕೊಡಲಾಗುತ್ತದೆ- ವಿಧಾನ ಪರಿಷತ್ ನಾಲ್ಕು ಸ್ಥಾನಗಳಿಗೆ ಬಿಜೆಪಿಯಿಂದ ಅಭ್ಯರ್ಥಿಗಳಾಗಿ ಘೋಷಿತರಾಗಿರುವವರಿಗೆ ಅಭಿನಂದನೆ ಸಲ್ಲಿಸುತ್ತ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಹೇಳಿದ ಮಾತುಗಳಿವು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಲಕ್ಷ್ಮಣ ಸವದಿ ಅವರು ಪಕ್ಷದ ರಾಜ್ಯ ಉಪಾಧ್ಯಕ್ಷರು, ಹೇಮಲತಾ ನಾಯಕ್ ಅವರು ಪಕ್ಷದ ಕಾರ್ಯದರ್ಶಿ, ಛಲವಾದಿ ನಾರಾಯಣಸ್ವಾಮಿ ಅವರು ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷರು, ಕೇಶವಪ್ರಸಾದ್ ಅವರು ಕಾರ್ಯದರ್ಶಿಗಳು ಮತ್ತು ಪ್ರಭಾರಿ ಎಂದು ವಿವರಿಸಿದರು. ನೈಋತ್ಯ ಕ್ಷೇತ್ರದ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರ ಹೆಸರನ್ನು ಪ್ರಕಟಿಸಿದ್ದು, ಅವರಿಗೂ ಅಭಿನಂದನೆಗಳು ಎಂದರು.
ನರೇಂದ್ರ ಮೋದಿಯವರ ಸರಕಾರ ಅದ್ಭುತವಾಗಿ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಮತ್ತು ಇತರ ಪಕ್ಷದವರು ಬೆಲೆ ಏರಿಕೆ ವಿರುದ್ಧ ಟೀಕೆ ಮಾಡುತ್ತಿದ್ದರು. ಆದರೆ, ಕೇಂದ್ರ ಸರಕಾರವು ಪೆಟ್ರೋಲ್ ಮತ್ತು ಡೀಸೆಲ್ ಸುಂಕ ಕಡಿಮೆ ಮಾಡಿ ದರ ಕಡಿಮೆ ಆಗುವಂತೆ ಮಾಡಿದೆ. ಜೊತೆಗೆ ಎಲ್‍ಪಿಜಿ ಸಿಲಿಂಡರ್ ಮೇಲಿನ ಸಬ್ಸಿಡಿ ಪ್ರಕಟಿಸಿರುವುದು ಸ್ವಾಗತಾರ್ಹ ಕ್ರಮ ಎಂದು ತಿಳಿಸಿದರು.
ಮಳೆಯಿಂದ ಸಂತ್ರಸ್ತರಾಗಿರುವವರಿಗೆ ತಕ್ಷಣವೇ ನೆರವು ನೀಡುವಲ್ಲಿ ಹಾಗೂ ದಾವೋಸ್ ಆರ್ಥಿಕ ಶೃಂಗಸಭೆಯಲ್ಲಿ ಭಾಗವಹಿಸಿ ಕರ್ನಾಟಕಕ್ಕೆ ಹೂಡಿಕೆ ತರುತ್ತಿರುವ ಮುಖ್ಯಮಂತ್ರಿಗಳ ಶ್ರಮವನ್ನು ಕಟೀಲ್ ಅಭಿನಂದಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!