ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರದಲ್ಲಿ ಇಬ್ಬರು ಹೆಣ್ಣುಮಕ್ಕಳನ್ನು ನಗ್ನಗೊಳಿಸಿ ಗ್ರಾಮದ ತುಂಬಾ ಬೆತ್ತಲೆ ಮೆರವಣಿಗೆ ಮಾಡಿದ್ದ ಪ್ರಕರಣದ ಬಗ್ಗೆ ಮಣಿಪುರ ಸಿಎಂ ಬಿರೇನ್ ಸಿಂಗ್ ರಿಯಾಕ್ಷನ್ ನೀಡಿದ್ದಾರೆ.
ಇದು ಮಾನವೀಯತೆಯ ವಿರುದ್ಧ ಮಾಡಿರುವ ಅಪರಾಧವಾಗಿದೆ. ರಾಜ್ಯ ಸರ್ಕಾರ ಅಪರಾಧಿಗಳನ್ನು ಬಂಧಿಸಿ, ಅವರಿಗೆ ಅತ್ಯಂತ ಕಠಿಣ ಶಿಕ್ಷೆ ಕೊಡಿಸಲು ಹಿಂದೇಟು ಹಾಕೋದಿಲ್ಲ. ಇದೊಂದು ಘೋರ ಅಪಘಾತ. ನಾನು ಇದನ್ನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ.
ಸೈಕುಲ್ ಠಾಣೆಯಲ್ಲಿ ಬಿ.ಫೈನೋಮ್ ಗ್ರಾಮದ ಮುಖ್ಯಸ್ಥ ತಂಗಬೈ ವೈಫೆ ದೂರು ನೀಡಿದ್ದಾರೆ. ಆದಷ್ಟು ಬೇಗ ದುಷ್ಕರ್ಮಿಗಳನ್ನು ಬಂಧಿಸುವಂತೆ ಪೊಲೀಸರಿಗೆ ತಿಳಿಸಲಾಗಿದೆ. ಇನ್ನು ಪೊಲೀಸ್ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳುವಲ್ಲಿನಿರ್ಲಕ್ಷ್ಯ ತೋರಿದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.