ಇದು ಐತಿಹಾಸಿಕ ಹೆಜ್ಜೆ ಎಂದ ರಾಹುಲ್: ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಒಗ್ಗಟ್ಟಿನ ಜಪ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮುಂದಿನ ಲೋಕಸಭೆಯಲ್ಲಿ ಕಾಂಗ್ರೆಸ್​​ ಪಕ್ಷ ಇತರ ಪಕ್ಷಗಳ ಜತೆಗೆ ಸೇರಿ ಅಧಿಕಾರಕ್ಕೆ ಬರಬೇಕು ಎಂದು ಹಲವಾರು ಕಾರ್ಯತಂತ್ರಗಳನ್ನು ಮಾಡುತ್ತಿದೆ. ಕಾಂಗ್ರೆಸ್, ಜನತಾ ದಳ (ಯುನೈಟೆಡ್) (ಜೆಡಿಯು) ಮತ್ತು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ದ ಪ್ರಮುಖ ನಾಯಕರು ಇಂದು ದೆಹಲಿಯಲ್ಲಿ ಭೇಟಿಯಾದರು.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಬುಧವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದು, ಬಿಜೆಪಿ ವಿರುದ್ಧ ಒಗ್ಗೂಡಿಸುವುದಾಗಿ ವಾಗ್ದಾನ ಮಾಡಿದ್ದಾರೆ.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ ಅವರು, ಇದು ಐತಿಹಾಸಿಕ ಸಭೆ ಎಂದು ಬಣ್ಣಿಸಿದರು. ಮುಂಬರುವ ಚುನಾವಣೆಗಾಗಿ ಎಲ್ಲ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಗುರಿ ಹೊಂದಿರುವುದಾಗಿ ತಿಳಿಸಿದರು.
ರಾಹುಲ್ ಗಾಂಧಿ ಮಾತನಾಡಿ, ವಿರೋಧ ಪಕ್ಷಗಳನ್ನು ಒಂದುಗೂಡಿಸಲು ಐತಿಹಾಸಿಕ ಹೆಜ್ಜೆ ತೆಗೆದುಕೊಳ್ಳಲಾಗಿದೆ.ಇದು ಒಂದು ಪ್ರಕ್ರಿಯೆ, ದೇಶಕ್ಕಾಗಿ ವಿರೋಧ ಪಕ್ಷದ ದೃಷ್ಟಿಕೋನವನ್ನು ಇದು ರೂಪಿಸುತ್ತದೆ ಎಂದು ಹೇಳಿದರು.

ಕೇಂದ್ರೀಯ ಸಂಸ್ಥೆಗಳ ಮೇಲಿನ ದಾಳಿಗಳ ವಿರುದ್ಧ ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದು ರಾಹುಲ್ ಗಾಂಧಿ ತಿಳಿಸಿದರು. ಇನ್ನು ಸಾಧ್ಯವಾದಷ್ಟು ಎಲ್ಲಾ ಪ್ರತಿ ಪಕ್ಷಗಳನ್ನು ಒಗ್ಗೂಡಿಸುವುದು ಮತ್ತು ಜತೆಗೆ ಕೆಲಸ ಮಾಡುವ ಪ್ರಯತ್ನವಾಗಿದೆ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!