May 10, 2026
Sunday, May 10, 2026
spot_img

ಇದು ದೇಶದ ಪ್ರಜಾಪ್ರಭುತ್ವದ ಪ್ರಶ್ನೆ: TMCಯ ಸೋಲನ್ನು ಸಂಭ್ರಮಿಸೋರಿಗೆ ಬುದ್ದಿವಾದ ಹೇಳಿದ ರಾಗ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿರುವುದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಟೀಕಿಸಿದ್ದಾರೆ.

ಈ ಗೆಲುವು ಜನಾದೇಶದ “ಕಳ್ಳತನ” ಎಂದು ಆರೋಪಿಸಿರುವ ಅವರು, ಇದು ಭಾರತೀಯ ಪ್ರಜಾಪ್ರಭುತ್ವವನ್ನು ಹಾನಿಗೊಳಿಸುವ ಪ್ರಯತ್ನದ ಭಾಗವಾಗಿದೆ ಎಂದು ಹೇಳಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ರಾಹುಲ್ ಗಾಂಧಿ, ಕೆಲವು ಮಂದಿ ಟಿಎಂಸಿಯ ಸೋಲನ್ನು ಸಂಭ್ರಮಿಸುತ್ತಿರುವುದು ತಪ್ಪು ಎಂದು ಹೇಳಿದ್ದಾರೆ. ಇದು ಒಂದು ಪಕ್ಷದ ವಿಷಯವಲ್ಲ, ದೇಶದ ಪ್ರಜಾಪ್ರಭುತ್ವದ ಪ್ರಶ್ನೆ ಎಂದು ಅವರು ಒತ್ತಿ ಹೇಳಿದ್ದಾರೆ.

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಚುನಾವಣಾ ಆಯೋಗದ ಸಹಾಯದಿಂದ ಫಲಿತಾಂಶವನ್ನು ತಮ್ಮ ಪರವಾಗಿ ತಿರುಗಿಸಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ 100ಕ್ಕೂ ಹೆಚ್ಚು ಸ್ಥಾನಗಳನ್ನು “ಕದ್ದಿದ್ದಾರೆ” ಎಂಬುದು ಮಮತಾ ಬ್ಯಾನರ್ಜಿ ಅವರ ಆರೋಪಕ್ಕೂ ತಮ್ಮ ಬೆಂಬಲವಿದೆ ಎಂದು ತಿಳಿಸಿದ್ದಾರೆ.

ಮಧ್ಯಪ್ರದೇಶ, ಹರಿಯಾಣ, ಮಹಾರಾಷ್ಟ್ರ ಮತ್ತು 2024ರ ಲೋಕಸಭಾ ಚುನಾವಣೆಯಲ್ಲಿಯೂ ಇದೇ ರೀತಿಯ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ನಾಯಕರು ಪುನಃ ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ಕೂಡ ಚುನಾವಣಾ ಆಯೋಗವನ್ನು “ಬಿಜೆಪಿಯ ಆಯೋಗ” ಎಂದು ಟೀಕಿಸಿದ ಬಳಿಕ ಈ ವಿವಾದ ಮತ್ತಷ್ಟು ತೀವ್ರಗೊಂಡಿದೆ. ಈ ಹೇಳಿಕೆಗಳು ದೇಶದ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !