ಹೊಸದಿಗಂತ ಡಿಜಿಟಲ್ ಡೆಸ್ಕ್:
ಇದು ಜಾತ್ಯಾತೀತ ರಾಷ್ಟ್ರ, ಇಂತಹ ಸಂದರ್ಭದಲ್ಲಿ ಜಾತಿಗಣತಿ ಯಾಕೆ ಬೇಕು ಎಂದು ಗೊತ್ತಾಗುತ್ತಿಲ್ಲ ಎಂದು ಸಂಸದ ಡಾ.ಮಂಜುನಾಥ್ ಹೇಳಿದ್ದಾರೆ.
ರಾಮನಗರದಲ್ಲಿ ಮಾತನಾಡಿದ ಅವರು, ಇಂದು ಅಂಬೇಡ್ಕರ್ ಜಯಂತಿ ಆಚರಣೆ ಮಾಡಲಾಗುತ್ತಿದೆ. ನಮ್ಮ ಸಂವಿಧಾನವೇ ಜಾತಿ ವ್ಯವಸ್ಥೆ ಬೇಡ ಎಂದು ಹೇಳುತ್ತದೆ. ಸಾಮಾಜಿಕ ಹಾಗೂ ಶೈಕ್ಷಣಿಕ ಮಟ್ಟದ ಬಗ್ಗೆ ಸಮೀಕ್ಷೆ ಮಾಡಿ. ಆದರೆ ಜಾತಿ ಜಾತಿಗಳ ನಡುವೆ ಕಂದಕ ಸೃಷ್ಟಿಸುವ ಕೆಲಸ ಮಾಡಬೇಡಿ. ಈ ಬಗ್ಗೆ ವಿಧಾನಸಭೆ, ವಿಧಾನ ಪರಿಷತ್ ನಲ್ಲಿ ಚರ್ಚೆ ಮಾಡಬೇಕು. ಸರ್ಕಾರದ ಆತುರದ ನಿರ್ಧಾರ ಸರಿಯಲ್ಲ” ಎಂದು ತಿಳಿಸಿದ್ದಾರೆ.