ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ವಿದೇಶದಿಂದ ಭಾರತಕ್ಕೆ ಹಿಂತಿರುಗಿ ಕಾನೂನು ಎದುರಿಸುವಂತೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಎಚ್ಚರಿಕೆ ನೀಡಿದ ಬೆನ್ನಲ್ಲೇ, ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಇದು ಗೌಡರ ಕೌಟುಂಬಿಕ ವಿಷಯ, ನಾನು ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ.
ಪ್ರಜ್ವಲ್ ರೇವಣ್ಣಗೆ ದೇವೇಗೌಡರು ಪತ್ರ ಬರೆದಿರುವ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಇದು ಕೌಟುಂಬಿಕ ವಿಚಾರವಾಗಿದ್ದು, ನಾನು ಮಧ್ಯಪ್ರವೇಶಿಸಲು ಬಯಸುವುದಿಲ್ಲ ಕ್ಷಮಿಸಿ ಎಂದು ತಿಳಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಅವರು ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ದೂರಿನ ಮೇರೆಗೆ ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದ ಮೇಲೆ ಕರ್ನಾಟಕ ಸರ್ಕಾರ ರಚಿಸಿರುವ ಎಸ್‌ಐಟಿಯಿಂದ ತನಿಖೆ ಎದುರಿಸುತ್ತಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಪತ್ರದಲ್ಲಿ, ಮಾಜಿ ಪ್ರಧಾನಿ ತನ್ನ ಮೊಮ್ಮಗ ಎಲ್ಲಿದ್ದಾನೆ ಎಂದು ತಿಳಿದಿಲ್ಲ ಆದರೆ ಮನೆಗೆ ಹಿಂತಿರುಗಿ ಕಾನೂನು ಎದುರಿಸುವಂತೆ ಎಚ್ಚರಿಸಿದ್ದಾರೆ ಎಂದು ಹೇಳಿದ್ದಾರೆ.