ಸೋನಿಯಾ ಗಾಂಧಿ ಜನ್ಮದಿನಕ್ಕೆ ಪ್ರಧಾನಿ ಮೋದಿ ವಿಶ್ ಮಾಡಿದ್ದು ಹೀಗೆ..

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು 77 ನೇ ಜನ್ಮದಿನವನ್ನು ಆಚರಿಸಿಕೊಳ್ತಿದ್ದಾರೆ.

ಪ್ರಧಾನಿ ಮೋದಿ ಸೋನಿಯಾ ಗಾಂಧಿ ಅವರ ಜನ್ಮದಿನಕ್ಕೆ ಶುಭಕೋರಿದ್ದು, ಭಗವಂತ ನಿಮಗೆ ದೀರ್ಘ ಹಾಗೂ ಆರೋಗ್ಯಕರ ಜೀವನ ನೀಡಲಿ ಎಂದಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಟ್ವೀಟ್‌ಮಾಡಿದ್ದು ಹುಟ್ಟು ಹಬ್ಬದ ಶುಭಾಷಯಗಳು ಸೋನಿಯಾಜೀ, ದೇವರು ನಿಮಗೆ ಸುದೀರ್ಘವಾದ ಹಾಗೂ ಆರೋಗ್ಯಕರವಾದ ಜೀವನವನ್ನು ನೀಡಲಿ ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಕೂಡ ಸೋನಿಯಾ ಗಾಂಧಿ ಅವರ ಜನ್ಮದಿನಕ್ಕೆ ಶುಭ ಕೋರಿದ್ದಾರೆ. ಹುಟ್ಟುಹಬ್ಬದ ಶುಭಾಷಯಗಳು, ದೀರ್ಘ ಆಯಸ್ಸು, ಆರೋಗ್ಯದ ಭಾಗ್ಯ ನಿಮ್ಮದಾಗಲಿ. ನಿಮ್ಮ ಸಲಹೆ, ಮಾರ್ಗದರ್ಶನ ಪಕ್ಷಕ್ಕೆ ಸಿಗಲಿ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!