ಇದು ಮಿತ್ರ್ ಕಾಲ್ ಬಜೆಟ್: ರಾಹುಲ್ ಗಾಂಧಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸರಕಾರದ ಈ ಬಜೆಟ್ ಯಾವುದೇ ಮಾರ್ಗಸೂಚಿ ಇಲ್ಲ ಎಂದು ಸಾಬೀತುಪಡಿಸುತ್ತದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ.

ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ ರಾಹುಲ್, ಮಿತ್ರ್ ಕಾಲ್ ಬಜೆಟ್ ಯಾವುದೇ ಉದ್ಯೋಗ ಸೃಷ್ಟಿಸುವ ಗುರಿ ಹೊಂದಿಲ್ಲ. ಬೆಲೆ ಏರಿಕೆಯನ್ನು ನಿಯಂತ್ರಿಸುವ ಯಾವುದೇ ಯೋಜನೆ ಹೊಂದಿಲ್ಲ. ಅಸಮಾನತೆಯನ್ನು ತಡೆಯುವ ಉದ್ದೇಶವಿಲ್ಲ.ಶೇ 1 ಶ್ರೀಮಂತರು ಶೇ 40 ಸಂಪತ್ತು ಹೊಂದಿದ್ದಾರೆ. ಶೇ 50 ಬಡವರು ಶೇ64 ಜಿಎಸ್​​​ಟಿ ಪಾವತಿ ಮಾಡುತ್ತಾರೆ.ಶೇ 42 ಯುವಕರು ನಿರುದ್ಯೋಗಿಗಳು- ಆದರೂ, ಪ್ರಧಾನಿ ಕಾಳಜಿ ವಹಿಸುವುದಿಲ್ಲ! ಭಾರತದ ಭವಿಷ್ಯವನ್ನು ನಿರ್ಮಿಸಲು ಸರ್ಕಾರಕ್ಕೆ ಯಾವುದೇ ಮಾರ್ಗಸೂಚಿ ಇಲ್ಲ ಎಂದು ಈ ಬಜೆಟ್ ಸಾಬೀತುಪಡಿಸುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!