ಇದು ಬಿಜೆಪಿ-ವಿರೋಧ ಪಕ್ಷ ಹೋರಾಟವಲ್ಲ, ಇಂಡಿಯಾ- ಮೋದಿ ಹೋರಾಟ: ರಾಹುಲ್‌ ಗಾಂಧಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ವಿಪಕ್ಷಗಳ ಸಭೆ ಅಂತ್ಯವಾಗಿದ್ದು, 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ರಣತಂತ್ರ ರೂಪಿಸುವ ಕುರಿತು ಹಲವು ಚರ್ಚೆ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ರಾಹುಲ್‌ ಗಾಂಧಿ ಇದು ಇಂಡಿಯಾ ಹಾಗೂ ಮೋದಿ ವಿರುದ್ಧದ ಹೋರಾಟ ಎಂದು ಹೇಳಿದ್ದಾರೆ.
ಬಿಜೆಪಿ‌ ದೇಶದ ಮೇಲೆ ದಾಳಿ‌ ನಡೆಸುತ್ತಿದೆ. ದೇಶದ ಸಂಪತ್ತನ್ನು ಜನರಿಂದ ಕಸಿಯಲಾಗುತ್ತಿದೆ. ಅದನ್ನು ಕೆಲವು ಉದ್ಯಮಿಗಳಿಗೆ ನೀಡಲಾಗುತ್ತಿದೆ. ಈ‌ ಹೋರಾಟ ವಿರೋಧ ಪಕ್ಷ ಹಾಗೂ ಬಿಜೆಪಿ ವಿರುದ್ಧ ಅಲ್ಲ. ದೇಶಕ್ಕಾಗಿ ನಡೆಯುವ ಹೋರಾಟವಾಗಿದೆ ಎಂದರು.

ಇಂದಿನ ಸಭೆಯಲ್ಲಿ ನಮ್ಮ ಹೋರಾಟ ಬಿಜೆಪಿ ವಿಚಾರಧಾರೆ, ಅವರ ಚಿಂತನೆ ವಿರುದ್ಧ. ಅವರು ದೇಶದ ಮೇಲೆ ಆಕ್ರಮಣ ಮಾಡಿ, ನಿರುದ್ಯೋಗ ಹರಡುತ್ತಿದ್ದು, ದೇಶದ ಸಂಪೂರ್ಣ ಸಂಪತ್ತು ಕೆಲವು ಉದ್ಯಮಿಗಳ ವಶಕ್ಕೆ ಸೇರುತ್ತಿದೆ. ಈ ಕಾರಣಕ್ಕೆ ನಾವು ನಮಗೆ ಪ್ರಶ್ನೆ ಕೇಳಿಕೊಂಡು ಈ ಹೋರಾಟ ಯಾರ ನಡುವೆ? ಇದು ಬಿಜೆಪಿ ಹಾಗೂ ವಿರೋಧ ಪಕ್ಷಗಳ ನಡುವಣ ಹೋರಾಟವಲ್ಲ. ಇದು ದೇಶದ ಧ್ವನಿಯ ಪರವಾದ ಹೋರಾಟ. ಈ ಕಾರಣಕ್ಕೆ ಈ ಮೈತ್ರಿಯನ್ನು ಇಂಡಿಯಾ ಎಂದು ಹೆಸರಿಡಲಾಗಿದೆ. ಈ ಹೋರಾಟ ಎನ್ ಡಿಎ ಹಾಗೂ ಇಂಡಿಯಾ ವಿರುದ್ಧ, ಇಂಡಿಯಾ ಹಾಗೂ ಮೋದಿ ವಿರುದ್ಧದ ಹೋರಾಟ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಯಾರೇ ಇಂಡಿಯಾ ವಿರುದ್ಧ ನಿಂತರು ಗೆಲವು ಯಾರಿಗೆ ಸಿಗುತ್ತದೆ ಎಂಬುದು ಎಲ್ಲರಿಗೂ ಗೊತ್ತಿದೆ. ಮುಂದಿನ ಸಭೆ ಮಹಾರಾಷ್ಟ್ರದಲ್ಲಿ ನಡೆಯಲಿದ್ದು, ಕಾರ್ಯ ಯೋಜನೆ ಸಿದ್ಧಪಡಿಸಿ ನಾವು ಒಂದಾಗಿ ನಮ್ಮ ವಿಚಾರಧಾರೆಗಳನ್ನು ಜನರಿಗೆ ತಿಳಿಸಬೇಕಿದೆ. ಬಿಜೆಪಿಯ ಸಿದ್ಧಾಂತಗಳು ಭಾರತದ ಪರಿಕಲ್ಪನೆ ಮೇಲೆ ದಾಳಿ ಮಾಡುತ್ತಿದೆ. ನಿರುದ್ಯೋಗ, ಬೆಲೆ ಏರಿಕೆ ಸಮಸ್ಯೆಗಳು ಹೆಚ್ಚುತ್ತಿವೆ.ಇದು ರಾಜಕೀಯ ಪಕ್ಷಗಳ ಹೋರಾಟವಲ್ಲ. ಇದು ಇಂಡಿಯಾದ ಪರಿಕಲ್ಪನೆ ರಕ್ಷಣೆಯ ಹೋರಾಟವಾಗಿದ್ದು, ನಾವು ಪ್ರಜಾಪ್ರಭುತ್ವ, ಸಂವಿಧಾನ, ಜನರ ಧ್ವನಿಯ ರಕ್ಷಣೆಗೆ ಹೋರಾಟ ಮಾಡುತ್ತಿದ್ದು, ಈ ಕಾರಣಕ್ಕೆ ನಾವು ನಮ್ಮ ಮೈತ್ರಿಯನ್ನು ಇಂಡಿಯಾ ಎಂದು ತೀರ್ಮಾನಿಸಿದ್ದೇವೆ ಎಂದು ರಾಹುಲ್‌ ಗಾಂಧಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!