ಇದು ರಾಜಕೀಯ ವಿಷಯವಲ್ಲ, ದೇಶದ ವಿಚಾರ: ಕೇಂದ್ರ ಸಚಿವೆ ರಕ್ಷಾ ನಿಖಿಲ್ ಕಾಡ್ಸೆ

ಹೊಸದಿಗಂತ ವರದಿ, ಹುಬ್ಬಳ್ಳಿ:

ಜಮ್ಮು ಕಾಶ್ಮೀರದಲ್ಲಿ ೩೭೦ ಕಾಯ್ದೆ ತೆರವುಗೊಳಿಸಿದ ಬಳಿಕ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿ ಪ್ರವಾಸಿಗರಿಗೆ ಅಚ್ಚುಮೆಚ್ಚಿನ ತಾಣವಾಗಿದೆ. ಇದನ್ನು ಸಹಿಸದ ಭಯೋತ್ಪಾಕರು ಹೀನ ಕೃತ್ಯ ಮಾಡಿದ್ದು, ಕೇಂದ್ರ ಸರ್ಕಾರ ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಕೇಂದ್ರ ಯುವಜನ ಸೇವಾ ಮತ್ತು ಕ್ರೀಡಾ ಖಾತೆ ರಾಜ್ಯ ಸಚಿವೆ ರಕ್ಷಾ ನಿಖಿಲ್ ಕಾಡ್ಸೆ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಿಷಯದಲ್ಲಿ ಎಲ್ಲ ವಿರೋಧ ಪಕ್ಷಗಳು ಕೇಂದ್ರ ಸರ್ಕಾರ ಸಹಕಾರ ನೀಡಿವೆ. ಇದು ರಾಜಕೀಯ ವಿಷಯವಲ್ಲ,ದೇಶದ ವಿಚಾರವಾಗಿದೆ. ಅಲ್ಲಿ ದೇಶದ ನಾಗಾರಿಕರ ಮೇಲೆ ದಾಳಿ ಮಾಡಲಾಗಿದೆ. ಈ ವಿಚಾರದಲ್ಲಿ ಎಲ್ಲ ಪಕ್ಷಗಳ ಸರ್ಕಾರ ಬೆಂಬಲ ನೀಡಬೇಕು ಎಂದರು.

ಜಮ್ಮು ಕಾಶ್ಮೀರದ ಪಹಲ್ಗಾಮನಲ್ಲಿ ನಡೆದ ಭಯೋತ್ಪಾದಕ ಘಟನೆ ಯಾರಿಂದಲ್ಲೂ ಸಹಿಸಲು ಸಾಧ್ಯವಿಲ್ಲ. ಈಗಾಗಲೇ ಪಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದರು.

ಜಮ್ಮು-ಕಾಶ್ಮೀರ ನಮ್ಮ ದೇಶ ಅವಿಭಾಜ್ಯ ಅಂಗವಾಗಿದೆ. ೩೭೦ ಕಾಯ್ದೆ ತೆರವುಗೊಳಿಸಿದ ಬಳಿಕ ಕಾಶ್ಮೀರದ ಜನರು ನಿಶ್ಚಿಂತೆಯಿಂದ ಬದುಕುವಂತಾಗಿದೆ. ಅಲ್ಲಿಯ ಜನರ ಜೊತೆ ಕೇಂದ್ರ ಸರ್ಕಾರವಿದೆ. ನಾಲ್ಕೈದು ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳ ಮಾಡಲಾಗಿದೆ. ಇನ್ನೂ ಶಿಕ್ಷಣ, ಆರೋಗ್ಯ ಹಾಗೂ ಕೈಗಾರಿಕಾ ಕ್ಷೇತ್ರ ಅಭಿವೃದ್ಧಿ ಆಗಬೇಕಿದೆ. ಭಯೋತ್ಪಾದಕ ಮುಕ್ತ ಮಾಡಲು ಕೇಂದ್ರ ಸರ್ಕಾರ ನಿರಂತರ ಪ್ರಯತ್ನ ಮಾಡುತ್ತಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!