March 24, 2026
Tuesday, March 24, 2026
spot_img

ಜವಾಬ್ದಾರಿಯಿಂದ ನುಣುಚ್ಕೋತಾ ಇದಾರಷ್ಟೇ ಮತ್ತೇನಿಲ್ಲ!: ಎಚ್‌ಡಿಕೆ ಟೀಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲಾಗದ ಮುಖ್ಯಮಂತ್ರಿಗಳು ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.

ರೈತರ ಕಷ್ಟಕ್ಕೆ ಸ್ಪಂದಿಸಬೇಕು ಎನ್ನುವ ಇರಾದೆ ಈ ಸರ್ಕಾರಕ್ಕೆ ಇಲ್ಲ. ಪ್ರತಿಯೊಂದು ವಿಷಯವನ್ನೂ ಕೇಂದ್ರದ ಮೇಲೆ ಹಾಕಿ ನುಣಚಿಕೊಳ್ಳುವ ಕೆಲಸ ಮಾಡುತ್ತಿದೆ ಎಂದರು.

ಮುಖ್ಯಮಂತ್ರಿಗಳು ಮನಸ್ಸು ಮಾಡಿದರೆ ಇದು ಅತ್ಯಂತ ಚಿಕ್ಕ‌ ವಿಚಾರ. ಕೆಲವೇ ನಿಮಿಷಗಳಲ್ಲಿ ಬಗೆಹರಿಸಬಹುದಾದ ವಿಷಯ ಇದಾಗಿದೆ. ಆದರೆ, ಸಿಎಂ ಅವರು ಪ್ರತಿಯೊಂದಕ್ಕೂ ರಾಜಕೀಯ ಮಾಡುತ್ತಿದ್ದಾರೆ. ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಮಂತ್ರಿಗೆ ಪತ್ರ ಬರೆದಿದ್ದಾರೆ. ದೇಶದ ಯಾವ ರಾಜ್ಯದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಪ್ರಧಾನಮಂತ್ರಿ ಮಧ್ಯಸ್ಥಿಕೆ ವಹಿಸಿದ್ದಾರೆ ಹೇಳಿ? ಎಂದು ಕೇಂದ್ರ ಸಚಿವರು ಪ್ರಶ್ನಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !