ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಾದಗಿರಿಯಲ್ಲಿ ಕಲುಷಿತ ನೀರು ಸೇವಿಸಿ 13 ಮಂದಿ ಅಸ್ವಸ್ಥರಾಗಿದ್ದಾರೆ.
ಯಾದಗಿರಿಯ ಸುರಪುರ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ನೀರು ಹಾಗೂ ಫುಡ್ ಪಾಯಿಸನಿಂಗ್‌ನಿಂಗಾಗಿ 13 ಜನ ಅಸ್ವಸ್ಥರಾಗಿದ್ದಾರೆ. ಇದರಲ್ಲಿ ಮಕ್ಕಳೂ ಸೇರಿದ್ದಾರೆ.
ಕೊಳವೆ ಬಾವಿಯ ನೀರನ್ನು ಮಕ್ಕಳು ಸೇವಿಸಿದ್ದು, ತಕ್ಷಣವೇ ವಾಂತಿ ಬೇಧಿಯಿಂದ ಬಳಲಿಸ್ದಾರೆ. ಕೆಲವೇ ದಿನಗಳ ಹಿಂದೆ ಯಾದಗಿರಿಯ ಹುಣಸಗಿ ತಾಲೂಕಿನ ಮಾರಲಭಾವಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದಾಗಿ 10 ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು.